ನವದೆಹಲಿ: ಭಾರತದಲ್ಲಿ ಕರೋನಾ 2ನೇ ಅಲೆ ಇಳಿಕೆಯ ಹಾದಿಯಲ್ಲಿದೆ. ಮಂಗಳವಾರ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ 86,498 ಹೊಸ ಪ್ರಕರಣ ಪತ್ತೆಯಾಗಿದೆ.
ದೇಶದಲ್ಲಿ 2123 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಈ ಪ್ರಮಾಣವು ಕಳೆದ 46 ದಿನಗಳಲ್ಲಿಯೇ ಕನಿಷ್ಠವಾಗಿದೆ. ಮಂಗಳ ವಾರದ ಅಂಕಿ ಸಂಖ್ಯೆಯೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,89,96,473ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,51,309ಕ್ಕೆ ಏರಿಕೆ ಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 13,03,702ಕ್ಕೆ ಏರಿಕೆಯಾಗಿದೆ.
1,82,282 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,73,41,462ಕ್ಕೆ ತಲುಪಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 23,61,98,726 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.