ನವದೆಹಲಿ: ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಮಾಜಿ ಬಾಕ್ಸರ್ ಡಿಂಗ್ಕೋ ಸಿಂಗ್ ನಿಧನರಾಗಿದ್ದಾರೆ. ಲಿವರ್ ಕ್ಯಾನ್ಸರ್ನಿಂದ ಬಳಲುತ್ತಿದ್ದರು ಎನ್ನಲಾಗಿದೆ.
1998ರಲ್ಲಿ ಬ್ಯಾಂಕಾಕ್ನಲ್ಲಿ ನಡೆದ ಏಷ್ಯನ್ ಗೇಮ್ಸ್ನಲ್ಲಿ ಚಿನ್ನದ ಸಾಧನೆ ಮಾಡಿದ್ದರು. 2017 ರಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಇವರ ಸಾವಿಗೆ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
‘ಡಿಂಗ್ಕೋ ಸಿಂಗ್ ಭಾರತದ ಅತ್ಯುತ್ತಮ ಬಾಕ್ಸರ್ಗಳಲ್ಲಿ ಒಬ್ಬರಾಗಿದ್ದು 1998 ರಲ್ಲಿ ಬ್ಯಾಂಕಾಕ್ನಲ್ಲಿ ನಡೆದ ಏಷ್ಯನ್ ಗೇಮ್ಸ್ನಲ್ಲಿ ಚಿನ್ನದ ಪದಕ ಪಡೆಯುವ ಮೂಲಕ ದೇಶದ ಬಾಕ್ಸಿಂಗ್ ಕ್ಷೇತ್ರದಲ್ಲಿ ಭರವಸೆ ಮೂಡಿಸಿದ್ದರು’ ಎಂದು ಟ್ವೀಟ್ ಮಾಡಿದ್ದಾರೆ.