Thursday, 21st November 2024

ಆರ್ಟಿಕಲ್ 370 ರದ್ದು ವಿಚಾರದಲ್ಲಿ ಕೆಂಗಣ್ಣಿಗೆ ಗುರಿಯಾದ ದಿಗ್ವಿಜಯ್ ಸಿಂಗ್

ನವದೆಹಲಿ: ಆರ್ಟಿಕಲ್ 370 ರದ್ದು ಹಾಗೂ ಜಮ್ಮು-ಕಾಶ್ಮೀರದ ಬಗ್ಗೆ ಕ್ಲಬ್ ಹೌಸ್ ಎಂಬ ಸಾಮಾಜಿಕ ಜಾಲತಾಣದಲ್ಲಿ  ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಆರ್ಟಿಕಲ್ 370 ರದ್ದುಗೊಳಿಸಿರುವುದು ಹಾಗೂ ಜಮ್ಮು-ಕಾಶ್ಮೀರದ ರಾಜ್ಯದ ಸ್ಥಾನವನ್ನು ಕಸಿದು ಕೇಂದ್ರಾಡಳಿತ ಪ್ರದೇಶ ವನ್ನಾಗಿ ಮಾಡಿರುವುದು ಬೇಸರದ ನಿರ್ಧಾರ. ಮೋದಿ ಸರ್ಕಾರದ ಅವಧಿ ಮುಗಿದು ತಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಈ ವಿಷಯವಾಗಿ ಮರುಪರಿಶೀಲನೆ ನಡೆಸುವುದಾಗಿ ಹೇಳಿರುವುದು ರಾಷ್ಟ್ರೀಯತೆ ಪ್ರತಿಪಾದಿಸುವವರ ಕೆಂಗಣ್ಣಿಗೆ ಗುರಿಯಾಗಿದೆ.

ದಿಗ್ವಿಜಯ್ ಸಿಂಗ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಬಿಜೆಪಿ, ದಿಗ್ವಿಜಯ್ ಸಿಂಗ್ ಭಾರತದ ವಿರೋಧಿಯಾಗಿದ್ದು, ಪಾಕಿಸ್ತಾನದ ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದೆ. ಕ್ಲಬ್ ಹೌಸ್ ನಲ್ಲಿ ದಿಗ್ವಿಜಯ ಯಾರೊಂದಿಗೆ ಚರ್ಚಿಸುತ್ತಿದ್ದರೋ ಅವರು ಪಾಕಿಸ್ತಾನಿ ಮೂಲದ ಪತ್ರಕರ್ತ ಎಂದು ಬಿಜೆಪಿ ಆರೋಪಿಸಿದ್ದು, ಸಿಂಗ್ ಹೇಳಿಕೆ ಬಗ್ಗೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸ್ಪಷ್ಟನೆ ನೀಡಬೇಕೆಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಆಗ್ರಹಿಸಿದ್ದಾರೆ.

ದಿಗ್ವಿಜಯ್ ಸಿಂಗ್ ಹೇಳಿರುವುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.