ಬೆಂಗಳೂರು: ರಸ್ತೆ ಅಪಘಾತದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಗಂಭೀರವಾಗಿ ಗಾಯಗೊಂಡಿದ್ದು, ಬನ್ನೇರು ಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಟ ವಿಜಯ್ ಶನಿವಾರ ರಾತ್ರಿ ತನ್ನ ಸ್ನೇಹಿತನೊಂದಿಗೆ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದ್ದು, ವಿಜಯ್ ಅವರ ಮೆದುಳಿನ ಬಲಭಾಗ ಹಾಗೂ ತೊಡೆಗೆ ತೀವ್ರ ಗಾಯವಾಗಿದೆ. ಹಾಗಾಗಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎನ್ನಲಾಗಿದೆ.
ಅಪಘಾತವಾದ ಕೂಡಲೇ ಅಪೋಲೊ ಆಸ್ಪತ್ರೆಗೆ ಕರೆತರಲಾಗಿದೆ. ಆಸ್ಪತ್ರೆಗೆ ತಂದಾಗಲೇ ಅವರ ಸ್ಥಿತಿ ಗಂಭೀರವಾಗಿದ್ದು, ಸ್ಕ್ಯಾನ್ ಮಾಡಿದಾಗ ಮೆದುಳಿನ ಬಲಭಾಗದಲ್ಲಿ ರಕ್ತಸ್ರಾವವಾಗುತ್ತಿತ್ತು. ಹೀಗಾಗಿ, ಅವರಿಗೆ ಮೆದುಳಿನ ಆಪರೇಷನ್ ನೆರವೇರಿಸಲಾಗಿದೆ. ಸಧ್ಯ ಅವರ ಸ್ಥಿತಿ ಚಿಂತಾಜನಕವಾಗಿದ್ದು ಎಂದು ಚಿಕಿತ್ಸೆ ನೀಡಿದ ವೈದ್ಯ ನ್ಯೂರೋ ಸರ್ಜನ್ ಡಾ. ಅನಿಲ್ ಕುಮಾರ್ ಹೇಳಿದ್ದಾರೆ.