Thursday, 19th September 2024

ಸಾವಲ್ಲೂ ಸಾರ್ಥಕತೆ ಮೆರೆದ ಸಂಚಾರಿ ವಿಜಯ್, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಬೆಂಗಳೂರು: ಅಪಘಾತದಿಂದ ನಿಧನರಾಗಿರುವ ಸ್ಯಾಂಡಲ್ ವುಡ್ ನಟ, ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಸಾವಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅವರ ಕುಟುಂಬಸ್ಥರು ವಿಜಯ್ ಅಂಗಾಂಗ ದಾನ ಮಾಡಿದ್ದಾರೆ.

ಪ್ರತಿಭಾವಂತ ನಟನ ಅಗಲಿಕೆಗೆ ಸಂತಾಪ ಸೂಚಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪ,ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿರುವ ಕುಟುಂಬದವರಿಗೆ ಕೃತಜ್ಞತೆಗಳ ಜೊತೆಗೆ ಸಂತಾಪ ಸೂಚಿಸುತ್ತೇನೆ ಎಂದಿದ್ದಾರೆ.

ಸಂಚಾರಿ ವಿಜಯ್ ಅವರು ರಂಗಭೂಮಿ, ಸಿನೆಮಾ ರಂಗಗಳೆರಡರಲ್ಲೂ ತಮ್ಮ ಮನೋಜ್ಞ ಅಭಿನಯದ ಮೂಲಕ ಗಮನ ಸೆಳೆದಿದ್ದರು. ಇದೇ ವೇಳೆ ಸಂಚಾರಿ ವಿಜಯ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಪೊಲೀಸ್ ಗೌರವಗಳೊಂದಿಗೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.