ನವದೆಹಲಿ: ಭಾರತದಲ್ಲಿ ದಿನೇ ದಿನೇ ಕರೋನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಮಧ್ಯೆ ಮೂರನೇ ಅಲೆ ಬರುವ ಭೀತಿ ಇನ್ನೂ ಕಡಿಮೆಯಾಗಿಲ್ಲ.
ಕಳೆದ 24 ಗಂಟೆಗಳಲ್ಲಿ 62,224 ಸೋಂಕಿತರು ಪತ್ತೆಯಾಗಿದ್ದರೆ 1,07,628 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಒಂದೇ ದಿನದಲ್ಲಿ 2542 ಮಂದಿ ಮೃತಪಟ್ಟಿದ್ದು, ಈ ಸಂಖ್ಯೆ 3,79,573 ಕ್ಕೆ ಏರಿದೆ. ಒಟ್ಟು 2,83,88,100 ಮಂದಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದಾರೆ. 8,65,432 ಸಕ್ರಿಯ ಪ್ರಕರಣಗಳಿವೆ, 2,96,33,105 ಒಟ್ಟು ಪ್ರಕರಣಗಳಿವೆ. ಇದುವರೆಗೆ 26,19,72,014 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದ್ದು, ಕಳೆದ 24 ಗಂಟೆಯಲ್ಲಿ 28,00,458 ಮಂದಿಗೆ ಲಸಿಕೆ ನೀಡಲಾಗಿದೆ.
ಪ್ರತಿ ಗಂಟೆಗೆ ಒಂದು ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ವೈರಸ್ ಲಸಿಕೆ ವಿತರಿಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ತಿಳಿಸಿದೆ.
ಮಂಗಳವಾರ ರಾತ್ರಿ 7 ಗಂಟೆ ವೇಳೆಗೆ 25,68,858 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.