ನವದೆಹಲಿ : ಮುಂದಿನ ಜುಲೈ 31 ರೊಳಗೆ 12ನೇ ತರಗತಿ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಘೋಷಿಸುವುದಾಗಿ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.
ಐಚ್ಛಿಕ ಪರೀಕ್ಷೆಗಳನ್ನು ಈ ವರ್ಷದ ಆಗಸ್ಟ್ 15 ಮತ್ತು ಸೆಪ್ಟೆಂಬರ್ 15ರ ನಡುವೆ ತಾತ್ಕಾಲಿಕವಾಗಿ ನಡೆಸಲಾಗುತ್ತದೆ ಎಂದು ತಿಳಿಸಿದೆ. ಕಂಪ್ಯೂಟಿಂಗ್ ಫಲಿತಾಂಶಗಳಿಗೆ ಸಂಬಂಧಿಸಿದ ಎಲ್ಲಾ ವಿವಾದಗಳನ್ನು ಸಮಿತಿಗೆ ಕಳುಹಿಸಲಾಗುವುದು.
ಸಿಬಿಎಸ್ಸಿ 12ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು, ಕರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ರದ್ದು ಪಡಿಸಿತ್ತು. ಈ ಹಿಂದಿನ ತರಗತಿಯ ಪರೀಕ್ಷಾ ಫಲಿತಾಂಶದ ಆಧಾರದ ಮೇಲೆ ಫಲಿತಾಂಶ ಪ್ರಕಟಿಸುವುದಾಗಿಯೂ ತಿಳಿಸಿತ್ತು.
ಈ ಹಿನ್ನಲೆಯಲ್ಲಿ ಇಂತಹ 12ನೇ ತರಗತಿ ಬೋರ್ಡ್ ಪರೀಕ್ಷೆಯ ಫಲಿತಾಂಶವನ್ನು ಜುಲೈ 31ಕ್ಕೆ ಪ್ರಕಟಿಸೋದಾಗಿ, ಸುಪ್ರೀಂ ಕೋರ್ಟ್ ಗೆ ಸಿಬಿಎಸ್ಸಿ ಬೋರ್ಡ್ ತಿಳಿಸಿದೆ ಎನ್ನಲಾಗಿದೆ.