ಬೆಂಗಳೂರು : ಮುಷ್ಕರ ನಡೆಸಲು ನಿರ್ಧರಿಸಿದ್ದ ನೌಕರರಿಗೆ ಮುಷ್ಕರವನ್ನು ಡಿಸೆಂಬರ್ ಅಂತ್ಯದವರೆಗೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶಿಸುವ ಮೂಲಕ, ಬಿಗ್ ಶಾಕ್ ನೀಡಿದೆ.
ಈ ಕುರಿತಂತೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಅಗತ್ಯ ಸೇವೆಗಳಲ್ಲಿ ಮುಷ್ಕರವನ್ನು ನಿಷೇಧಿಸಿದೆ. ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ನಿಗಮ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮತ್ತು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನೌಕರರು ಸಾರ್ವಜನಿಕ ಹಿತಾಸಕ್ತಿ, ಸಾರ್ವಜನಿಕ ಹಿತದೃಷ್ಠಿಯಿಂದ ದಿನಾಂಕ ಜುಲೈ1ರಿಂದ ಡಿಸೆಂಬರ್ 31ರವರೆಗೆ ಮುಷ್ಕರ ನಡೆಸದಂತೆ ಆದೇಶಿಸಿದೆ.
ಲಾಕ್ ಡೌನ್ ನಿಂದಾಗಿ ಸಾರಿಗೆ ನಿಗಮಗಳು ಆರ್ಥಿಕ ಸಂಕಷ್ಟವನ್ನು ಎದುರಿಸಿವೆ. ಗಮದ ನೌಕರರು ಜುಲೈ1ರಂದು ನೌಕರರ ಕೂಟದ ಸಭೆ ನಡೆಸಿ, ತಮ್ಮ ಬೇಡಿಕೆ ಈಡೇರಿಕೆಗಾಗಿ ಮುಷ್ಕರ ನಡೆಸಲಿದ್ದಾರೆ ಎನ್ನಲಾಗುತ್ತಿತ್ತು.