ಶ್ರೀನಗರ್: ಭಾರತೀಯ ವಾಯುಸೇನೆ ನಿಯಂತ್ರಣದಲ್ಲಿ ಇರುವ ಜಮ್ಮು ವಿಮಾನ ನಿಲ್ದಾಣದಲ್ಲಿ ಭಾನುವಾರ ಸಂಭವಿಸಿದ ಎರಡು ಲಘುಸ್ಫೋಟದ ಹಿನ್ನೆಲೆಯಲ್ಲಿ ಪಂಜಾಬ್ ಗಡಿ ಜಿಲ್ಲೆ ಪಠಾಣ್ ಕೋಟ್ನಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ಪಠಾಣ್ಕೋಟ್ನ ಕೇಂದ್ರ ಸ್ಥಳಗಳಲ್ಲಿ ಬಳಿ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಪಠಾಣ್ಕೋಟ್ ಸುತ್ತಮುತ್ತಲಿನ ಸೂಕ್ಷ್ಮ ಪ್ರದೇಶಗಳಲ್ಲಿ ಗಸ್ತು ತಿರುಗುವಿಕೆ ಉದ್ದೇಶದಿಂದ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಕ್ಕಪಕ್ಕದ ಪ್ರದೇಶಗಳಲ್ಲಿ ಈ ರೀತಿಯ ಘಟನೆಗಳು ನಡೆದ ಸಂದರ್ಭದಲ್ಲಿ ನಾವು ಹೆಚ್ಚುವರಿ ಎಚ್ಚರಿಕೆ ವಹಿಸುತ್ತೇವೆ,” ಎಂದು ಪಠಾಣ್ಕೋಟ್ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಲಂಬಾ ಹೇಳಿದ್ದಾರೆ.
SWAT ತಂಡ, ಪಂಜಾಬ್ ಪೊಲೀಸರು ಹಾಗೂ ವಿಶೇಷ ಕಾಮಾಂಡೋಗಳನ್ನು ಆಯಕಟ್ಟಿನ ಸ್ಥಳಗಳಲ್ಲಿ ನಿಯೋಜಿಸಲಾಗುತ್ತವೆ. ಪಂಜಾಬಿಗೆ ಜಮ್ಮು ಮತ್ತು ಕಾಶ್ಮೀರಕ್ಕೆ ಹೋಗುವ ಮತ್ತು ಅಲ್ಲಿಂದ ರಾಜ್ಯದ ಗಡಿಯನ್ನು ಪ್ರವೇಶಿಸುವ ಪ್ರತಿಯೊಂದು ವಾಹನಗಳು ಮತ್ತು ಪ್ರಯಾಣಿಕರ ಮೇಲೆ ನಿಗಾ ವಹಿಸಲಾಗುವುದು,” ಎಂದು ಲಾಂಬಾ ಹೇಳಿದ್ದಾರೆ.
ಭಾನುವಾರ ಬೆಳಗಿನ ಜಾವ ಮೊದಲ ಸ್ಫೋಟ ಸಂಭವಿಸಿದ್ದು, ಕಟ್ಟಡದ ತಾಂತ್ರಿಕ ವಿಭಾಗದಲ್ಲಿನ ಮೇಲ್ಛಾವಣಿಗೆ ಹಾನಿಯಾಗಿದೆ. ಒಂದೇ ಕಿಲೋ ಮೀಟರ್ ದೂರದಲ್ಲಿ ಇರುವ ಬಯಲು ಪ್ರದೇಶದಲ್ಲಿ ಎರಡನೇ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.
ಇಬ್ಬರು ಭಾರತೀಯ ಸೇನಾ ಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ. ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.