Friday, 22nd November 2024

ಜು.16ವರೆಗೂ ಲಾಕ್ ಡೌನ್ ವಿಸ್ತರಿಸಿದ ಒಡಿಶಾ ಸರ್ಕಾರ

ನವದೆಹಲಿ: ಕೋವಿಡ್ 19 ಸೋಂಕು ಪ್ರಕರಣದ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಜು.16ವರೆಗೂ ಭಾಗಶಃ ಲಾಕ್ ಡೌನ್ ವಿಸ್ತರಿಸಲು ನಿರ್ಧರಿಸಿದೆ.

20 ಜಿಲ್ಲೆಗಳಲ್ಲಿ ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, ’ಎ’ ಕೆಟಗರಿ ಎಂದು ಗುರುತಿಸ ಲಾಗಿದೆ. ಉಳಿದ ಹತ್ತು ಕರಾವಳಿ ಜಿಲ್ಲೆಗಳಲ್ಲಿ ಪ್ರಕರಣ ಹೆಚ್ಚಳ ವಾಗಿದ್ದು, ಬಿ ಕೆಟಗರಿ ಎಂದು ಗುರುತಿಸಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಎಸ್ ಸಿ ಮಹಾಪಾತ್ರ ತಿಳಿಸಿದ್ದಾರೆ.

ಎ ಕೆಟಗರಿ ಜಿಲ್ಲೆಗಳಲ್ಲಿ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಅಂಗಡಿ, ಮುಂಗಟ್ಟು ತೆರೆಯಲು ಅನುಮತಿ ನೀಡಲಾಗಿದೆ. ಬಸ್ (ಸೀಟುಗಳ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯಾಣಿಕರಿಗೆ ಅವಕಾಶ ವಿಲ್ಲ), ರಿಕ್ಷಾ ಮತ್ತು ಕಾರುಗಳ ಓಡಾಟಕ್ಕೆ ಅನುಮತಿ ನೀಡಲಾಗಿದೆ. ವಾರಾಂತ್ಯದ ಲಾಕ್ ಡೌನ್ ಇಲ್ಲ.

ಬಿ ಕೆಟಗರಿ ಜಿಲ್ಲೆಯಲ್ಲಿ ಬೆಳಗ್ಗೆ 6ರಿಂದ 2ಗಂಟೆವರೆಗೆ ಅಂಗಡಿ ತೆರೆಯಲು ಅವಕಾಶ, ಆದರೆ ಶಾಪಿಂಗ್ ಮಾಲ್, ಸ್ಪಾ, ಬ್ಯೂಟಿ ಪಾರ್ಲರ್ ತೆರೆಯಲು ಅನುಮತಿ ಇಲ್ಲ. ಬಸ್ ಸಂಚಾರಕ್ಕೆ ಅವಕಾಶ ಇಲ್ಲ. ವಾರಾಂತ್ಯದ ಲಾಕ್ ಡೌನ್ ಎಂದಿನಂತೆ ಮುಂದುವರಿಯಲಿದೆ ಎಂದು ಹೇಳಿದೆ.