ಲಕ್ನೋ: ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಅನಾರೋಗ್ಯದ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
81 ವರ್ಷದ ಮುಲಾಯಂ ಸಿಂಗ್ ಯಾದವ್ ಅವರಿಗೆ ವಯೋ ಸಹಜ ಕಾರಣಗಳಿಂದ ಅನಾರೋಗ್ಯ ಕಾಡಿದೆ ಎಂದು ಮೂಲಗಳು ಹೇಳಿವೆ. ಮುಲಾಯಂ ಸಿಂಗ್ ಯಾದವ್ ಅವರಿಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಾಯಕ ಮುಲಾಯಂ ಸಿಂಗ್ ಯಾದವ್ ಅವರು ಕಳೆದ ಕೆಲವು ವರ್ಷಗಳಿಂದ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಕಳೆದ ವರ್ಷವೂ ಮೂತ್ರನಾಳದಲ್ಲಿ ಸೋಂಕಿನ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮುಲಾಯಂ ಅವರು ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾರೆ. ಕೇಂದ್ರ ಸಚಿವರಾಗಿದ್ದ ಅವರು ರಕ್ಷಣಾ ಮಂತ್ರಿಯೂ ಆಗಿದ್ದರು. ಅವರ ಪುತ್ರ ಅಖಿಲೇಶ್ ಯಾದವ್ 2012ರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು.