Monday, 25th November 2024

ಪಿಯು ಫಲಿತಾಂಶ ವಿಳಂಬ ಸಾಧ್ಯತೆ

ಬೆಂಗಳೂರು:
ಪ್ರಸಕ್ತ ಶೈಕ್ಷಣಿಕ ವರ್ಷದ ವಾರ್ಷಿಕ ಪರೀಕ್ಷೆ ಫಲಿತಾಂಶವನ್ನು ಸ್ವಲ್ಪ ತಡವಾಗಿ ಪ್ರಕಟಿಸಲು ಪಿಯುಸಿ ಬೋರ್ಡ್ ಚಿಂತನೆ ನಡೆಸಿದೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ (ನೀಟ್) ಪರೀಕ್ಷೆ ಫಲಿತಾಂಶ ಪ್ರಕಟಗೊಂಡ ನಂತರ ಪಿಯುಸಿ ಫಲಿತಾಂಶ ಪ್ರಕಟಿಸುವ ಬಗ್ಗೆೆ ಶಿಕ್ಷಣ ಇಲಾಖೆಯಲ್ಲಿ ಮಾತುಕತೆ ನಡೆದಿದೆ.

ಇಲಾಖಾ ಕಚೇರಿಯಲ್ಲಿ ಆಯೋಜಿಸಲಾಗಿದ್ದ ’ಸಂವೇದನಾ ಫೋನ್ ಇನ್’ ಕಾರ್ಯಕ್ರಮದಲ್ಲಿ, ವಿದ್ಯಾಾರ್ಥಿಗಳ ಮಾನಸಿಕ ಒತ್ತಡ ಕಡಿಮೆ ಮಾಡುವ ನಿಟ್ಟಿಿನಲ್ಲಿ ಚಿಂತನೆ ನಡೆಸುವಂತೆ ಪೋಷಕರೊಬ್ಬರ ಮನವಿಗೆ ಸಚಿವ ಸುರೇಶ್ ಕುಮಾರ್ ಸ್ಪಂದಿಸಿದ್ದಾರೆ. ನೀಟ್ ಫಲಿತಾಂಶದ ನಂತರ, ಪಿಯುಸಿ ಫಲಿತಾಂಶ ಪ್ರಕಟಿಸುವ ವಿಚಾರದಲ್ಲಿ ಇಲಾಖೆ ಅಧಿಕಾರಿಗಳ ಜತೆ ಮಾತುಕತೆ ನಡೆಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾಾರೆ.

ಕರ್ನಾಟಕದ ಪದವಿಪೂರ್ವ ಶಿಕ್ಷಣ ಇಲಾಖೆಯು 2020ನೇ ಸಾಲಿನ ದ್ವಿಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಾಲಿಕ ವೇಳಾಪಟ್ಟಿಿಯನ್ನು ಈಗಾಗಲೇ ಬಿಡುಗಡೆ ಮಾಡಿದೆ. ಆಕ್ಷೇಪಣೆಗಳಿದ್ದರೆ ಸಲ್ಲಿಕೆ ಮಾಡುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 2020ರ ಮಾರ್ಚ್ 4ರಿಂ19ರವರೆಗೆ ಈ ಬಾರಿಯ ದ್ವಿಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ತಾತ್ಕಾಾಲಿಕ ವೇಳಾಪಟ್ಟಿಿಗೆ ಬರುವ ಆಕ್ಷೇಪಣೆ ಸ್ವೀಕರಿಸಿದ ಬಳಿಕ ಅಂತಿಮ ವೇಳಾಪಟ್ಟಿಿ ಬಿಡುಗಡೆ ಮಾಡಲಾಗುವುದು ಎಂದು ಇಲಾಖೆ ತಿಳಿಸಿದೆ.