ನವದೆಹಲಿ: “2023ರಲ್ಲಿ ನಡೆಯುವ ಕರ್ನಾಟಕ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ ಮಾಡಿದ್ದೇವೆ” ಎಂದು ನಡ್ಡಾ ಭೇಟಿ ಬಳಿಕ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ರಾಜೀನಾಮೆ ಕೊಡುವ ಪ್ರಶ್ನೆಯನ್ನು ತಳ್ಳಿ ಹಾಕಿದರು. ರಾಜೀನಾಮೆ ಕೊಡುವಂತೆ ಯಾರೂ ಸೂಚಿಸಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಹೊಣೆ ನನ್ನ ಮೇಲಿದೆ. ಇನ್ಮೇಲೆ ತಿಂಗಳಿಗೊಮ್ಮೆ ದೆಹಲಿ ಪ್ರವಾಸ ಮಾಡುತ್ತೇನೆ. ವರಿಷ್ಠರ ಸೂಚನೆಯಂತೆ ಪಕ್ಷ ಸಂಘಟನೆ ಹಾಗೂ ಅಭಿವೃದ್ಧಿ ಪರ ಸರ್ಕಾರ ನಡೆಸುವೆ” ಎಂದು ಯಡಿಯೂರಪ್ಪ ಹೇಳಿಕೆ ಕೊಟ್ಟಿದ್ದಾರೆ.
ಇದೀಗ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ. ಇದೇ ಜುಲೈ 26ಕ್ಕೆ ಬಿ.ಎಸ್.ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಎರಡು ವರ್ಷಗಳ ಅವಧಿ ಪೂರೈಸಲಿದ್ದಾರೆ.