Sunday, 24th November 2024

ಕರೋನಾ ಬ್ರೇಕಿಂಗ್: 41,157 ಹೊಸ ಪ್ರಕರಣ ಪತ್ತೆ

ನವದೆಹಲಿ: ಕಳೆದ 24 ಗಂಟೆ ಅವಧಿಯಲ್ಲಿ ದೇಶದಲ್ಲಿ 41,157 ಮಂದಿ ಹೊಸ ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 518 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

42,004 ಮಂದಿ ಕೋವಿಡ್ ಸೋಂಕಿತರು ಗುಣಮುಖರಾಗಿದ್ದಾರೆ. ಇದುವರೆಗೆ 3,02,69,796 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಕೇರಳ ರಾಜ್ಯದಲ್ಲಿ 16,148 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 8172 ಸೋಂಕು ಪ್ರಕರಣಗಳು, ಆಂಧ್ರ ಪ್ರದೇಶದಲ್ಲಿ 2,672 ಪ್ರಕರಣಗಳು, ತಮಿಳುನಾಡಿನಲ್ಲಿ 2205 ಪ್ರಕರಣಗಳು ಮತ್ತು ಒಡಿಶಾ ರಾಜ್ಯದಲ್ಲಿ 2182 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಕೇರಳ ರಾಜ್ಯವೊಂದೇ ದೇಶದ ಶೇ. 39.24 ರಷ್ಟು ಸೋಂಕು ಪ್ರಕರಣಗಳಿಗೆ ಕಾರಣವಾಗಿದೆ.