Friday, 22nd November 2024

ಪರೀಕ್ಷಾ ಕೇಂದ್ರಗಳ ಪರಿಶೀಲನೆ ನಡೆಸಿದ ಸಚಿವ ಸುರೇಶ್ ಕುಮಾರ್‌

suresh kumar

ರಾಮನಗರ : ಬಿಡದಿಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಸವೇಶ್ವರ ಪ್ರೌಢಶಾಲೆ, ರಾಮನಗರದ ಶಾಂತಿನಿಕೇತನ ಶಾಲೆ, ಭಾರತೀಯ ಸಾಂಸ್ಕೃತಿ ವಿದ್ಯಾಪೀಠ, ಸರ್ಕಾರಿ ಪದವಿ ಪೂರ್ವ ಕಾಲೇಜು, ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಸೆಂಟ್ ಆನ್ಸ್ ಪ್ರೌಢಶಾಲೆ ಹಾಗೂ ಚನ್ನಪಟ್ಟಣದ ಚೆಕ್ಕೆರೆಯ ಸರ್ಕಾರಿ ಪ್ರೌಢಶಾಲೆಗೆ ಶಿಕ್ಷಣ ಸಚಿವರಾದ ಎಸ್. ಸುರೇಶ್ ಕುಮಾರ್ ಅವರು ಭಾನುವಾರ ಭೇಟಿ ನೀಡಿ ಪರೀಕ್ಷಾ ಕೇಂದ್ರಗಳ ಪರಿಶೀಲನೆ ನಡೆಸಿದರು.

ಪರಿಶೀಲನೆಯ ಸಂದಭ೯ದಲ್ಲಿ ಸಾವ೯ಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಮಕ್ಕಳಿಗೆ ಪರೀಕ್ಷೆ ಬರೆಯಲು ಯಾವುದೇ ತೊಂದರೆಯಾಗ ದಂತೆ ವ್ಯವಸ್ಥೆ ಯಾಗಬೇಕು. ಈ ಬಾರಿ ಪರೀಕ್ಷೆ ಒ.ಎಮ್.ಆರ್ ಶೀಟ್ ನಲ್ಲಿ ಇರುವ ಹಿನ್ನೆಲೆಯಲ್ಲಿ ಪರೀಕ್ಷಾ ನೋಂದಣಿ ಸಂಖ್ಯೆ ಸರಿಯಾಗಿ ವಿದ್ಯಾಥಿ೯ಗಳು ನಮೂದಿಸಿರುವ ಬಗ್ಗೆ ಪರೀಕ್ಷಾ ಮೇಲ್ವಿಚಾರಕರು ಪರಿಶೀಲಿಸುವಂತೆ ತಿಳಿಸಿದರು.

ಮಳೆ ಇರುವ ಹಿನ್ನೆಲೆಯಲ್ಲಿ ವಿದ್ಯಾಥಿ೯ಗಳು ಪರೀಕ್ಷಾ ಕೇಂದ್ರ ಗಳಿಗೆ ಬೇಗ ಆಗಮಿಸಿದರೆ ಅವರಿಗೆ ಕುಳಿತು ಕೊಳ್ಳಲು ವ್ಯವಸ್ಥೆ ಮಾಡಬೇಕು. ಕೋವಿಡ್ ಪಾಸಿಟೀವ್ ಇರುವ ವಿದ್ಯಾರ್ಥಿಗಳಿಗೆ ಹತ್ತಿರದ ಕೋವಿಡ್ ಕೇರ್ ಸೆಂಟರ್‌ನಲ್ಲಿ ಪರೀಕ್ಷೆ ಬರೆಯಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾಥಿ೯ ಗಳಿಗೆ ಸ್ಯಾನಿಟೈಜರ್, ಕುಡಿಯುವ ನೀರು, ಶೌಚಾಲಯ ಹಾಗೂ ಇನ್ನಿತರ ಮೂಲಭೂತ ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

 

ಮುಂದಿನ ವರ್ಷದ ಶೈಕ್ಷಣಿಕ ಸಾಲು ಆರಂಭಿಸುವ ಬಗ್ಗೆ ಸಾವ೯ಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ನೇತೃತ್ವದಲ್ಲಿ ಕಾಯ೯ಪಡೆ ರಚಿಸಲಾಗಿದ್ದು, ಯಾವ ತರಗತಿಗಳನ್ನು ಮೊದಲು ಪ್ರಾರಂಭಿಸಬೇಕು, ಯಾವಾಗ ಪ್ರಾರಂಭಿಸಬೇಕು, ಯಾವ ರೀತಿ ಪ್ರಾರಂಭಿಸಬೇಕೆಂಬುದನ್ನು ಈ ತಿಂಗಳ ಅಂತ್ಯದಲ್ಲಿ ವರದಿ ನೀಡಲಿ ದ್ದಾರೆ ಎಂದು ತಿಳಿಸಿದರು.

ಈ ಬಾರಿ ಪರೀಕ್ಷಾ ಕೇಂದ್ರ, ಕೊಠಡಿ ಹಾಗೂ ಸಿಬ್ಬಂದಿ ಗಳ ಸಂಖ್ಯೆಯನ್ನು ಹೆಚ್ಚಳ ಮಾಡಲಾಗಿದೆ.ಮಕ್ಕಳು ಮತ್ತು ಪೋಷಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು. ಪರೀಕ್ಷೆಯ ನಂತರ ವಿದ್ಯಾರ್ಥಿಗಳು ಪರೀಕ್ಷೆಯ ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಲಿದ್ದಾರೆ ಎಂದರು.

ಕಳೆದ ಬಾರಿ 3310 ಇದ್ದ ಪರೀಕ್ಷಾ ಕೇಂದ್ರಗಳನ್ನು 4885 ಹಾಗೂ 48000 ಪರೀಕ್ಷಾ ಕೊಠಡಿಗಳನ್ನು 73064 ಕ್ಕೆ ಹೆಚ್ಚಳ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಆದಷ್ಟು ಅವರಿಗೆ ಹತ್ತಿರವಿರುವ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವ ವ್ಯವಸ್ಥೆ ಮಾಡಲಾಗಿದೆ ಎಂದರು.