Sunday, 24th November 2024

ಮಹಾಮಾರಿ ಕರೋನಾ ಏರಿಳಿತ: 35,342 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆ

ನವದೆಹಲಿ: ಭಾರತದಲ್ಲಿ ಮಹಾಮಾರಿ ಕರೋನಾ ಏರಿಳಿತದ ಬೆಳವಣಿಗೆ ಮುಂದುವರೆದಿದೆ. ಶುಕ್ರವಾರ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 35,342 ಮಂದಿಯಲ್ಲಿ ಹೊಸದಾಗಿ ಕರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 483 ಮಂದಿ ಬಲಿಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 3,12,93,062ಕ್ಕೆ ತಲುಪಿದ್ದು, ಸಾವಿನ 4,19,470ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಗುಣಮುಖರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 4,05,513ಕ್ಕೆ ಕುಸಿದಿದೆ.

ಕಳೆದ 24 ಗಂಟೆಗಳಲ್ಲಿ 38,740 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,04,68,079ಕ್ಕೆ ತಲುಪಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 42,34,17,030 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.