Thursday, 19th September 2024

ಬಾರಾಮುಲ್ಲಾದಲ್ಲಿ ಗುಂಡಿನ ಚಕಮಕಿ: ಪೊಲೀಸ್ ಪೇದೆ ಗಾಯಾಳು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಓರ್ವ ಪೊಲೀಸ್ ಪೇದೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಾರಾಮುಲ್ಲಾ ಜಿಲ್ಲೆಯ ಚಂದೂಸಾ ಎಂಬಲ್ಲಿ ಫಜಲ್ ಅಹ್ಮದ್ ಎಂಬ ವ್ಯಕ್ತಿಗೆ ಭದ್ರತೆಯನ್ನು ನೀಡಲಾಗಿತ್ತು. ಸೋಮವಾರ ಬೆಳಗಿನ ಜಾವ ಸ್ಥಳಕ್ಕೆ ಬಂದಿರುವ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಘಟನೆಯಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಪೇದೆ ಅಲ್ತಾಫ್ ಎಂಬುವರು ಗಾಯಗೊಂಡಿ ದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಎನ್ನಲಾಗಿದೆ.

ಭದ್ರತೆ ಒದಗಿಸಲಾಗಿದ್ದ ಫಜರ್ ಅಹ್ಮದ್ ಅವರು ಮಾಜಿ ಉಪ ಮುಖ್ಯಮಂತ್ರಿ ಮುಜಾಫರ್ ಬೇಗ್ ಅವರ ಸಹೋದರನಾಗಿದ್ದಾರೆಂದು ತಿಳಿದುಬಂದಿದೆ. ಅಹ್ಮದ್ ಅವರ ಕುಟುಂಬ ಸುರಕ್ಷಿತವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.