ನೈನಿತಾಲ್: ಕರೋನಾ ಹಿನ್ನೆಲೆಯಲ್ಲಿ ಆಗಸ್ಟ್ 18ರವರಗೆ ಚಾರ್ ಧಾಮ್ ಯಾತ್ರೆಯನ್ನು ನೈನಿತಾಲ್ ಹೈಕೋರ್ಟ್ ಬುಧವಾರ ನಿರ್ಬಂಧಿಸಿದೆ.
ರಾಜ್ಯದ ಪ್ರವಾಸಿ ಸ್ಥಳಗಳಲ್ಲಿ ಪ್ರವಾಸಿಗರು ಕೋವಿಡ್ ನಿಯಮಾವಳಿಗಳನ್ನು ಸರಿಯಾಗಿ ಅನುಸರಿಸದಿದ್ದಕ್ಕಾಗಿ ನ್ಯಾಯಾಲಯವು ಉತ್ತರಾಖಂಡ ಸರ್ಕಾರವನ್ನು ತೀವ್ರವಾಗಿ ಖಂಡಿಸಿದೆ. ಮೇ.14ರಿಂದ ಆರಂಭವಾಗಬೇಕಿದ್ದ ಚಾರ್ ಧಾಮ್ ಯಾತ್ರೆಯನ್ನು ಕೊರೋನಾ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿತ್ತು. ಆದರೆ, ರುದ್ರ ಪ್ರಯಾಗ ಜಿಲ್ಲೆಯಲ್ಲಿ ಕೇದಾರನಾಥ ದೇಗುಲ, ಚಮೋಲಿಯಲ್ಲಿ ಬದ್ರಿನಾಥ್ ಹಾಗೂ ಉತ್ತರಕಾಶಿಯಲ್ಲಿನ ಯಮುನೋತ್ರಿ, ಗಂಗೋತ್ರಿ ದೇಗುಲಗಳಿಗೆ ತೆರಳಲು ಸರ್ಕಾರ ಅನುಮತಿ ನೀಡಿತ್ತು.
ಈ ಹಿಂದೆ ಜು.28 ರವರೆಗೂ ಚಾರ್ ಧಾಮ್ ಯಾತ್ರೆಗೆ ಹೈಕೋರ್ಟ್ ತಡೆ ನೀಡಿತ್ತು. ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ಮತ್ತೆ ಆಗಸ್ಟ್ 18ರವರೆಗೆ ನಿರ್ಬಂಧಿಸಿ ಆದೇಶ ಹೊರಡಿಸಿತು.