Friday, 20th September 2024

ಭಜರಂಗ ಪುನಿಯಾ ಅದ್ಭುತವಾಗಿ ಹೋರಾಡಿದ್ದಾರೆ: ಪ್ರಧಾನಿ ಅಭಿನಂದನೆ

ನವದೆಹಲಿ: ಟೋಕಿಯೊ ಒಲಂಪಿಕ್ಸ್ ಕ್ರೀಡಾಕೂಟದ ಕುಸ್ತಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಬಜರಂಗ್ ಪುನಿಯಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ದೂರ ವಾಣಿ ಕರೆ ಮಾಡಿ ಅಭಿನಂದಿಸಿದ್ದಾರೆ.

ಕಂಚಿನ ಪದಕಕ್ಕಾಗಿನ ಹೋರಾಟದಲ್ಲಿ ಭಾರತದ ಕುಸ್ತಿಪಟು ಬಜರಂಗ್ ಪೂನಿಯಾ, ಕಜಕಿಸ್ತಾನದ ದೌಲತ್ ನಿಯಾಜ್‌ಬೆಕೋವ್ ವಿರುದ್ಧ ಗೆಲುವು ದಾಖಲಿಸಿ ಕಂಚಿನ ಪದಕ ಸಾಧಿಸಿದ್ದಾರೆ. 65 ಕೆಜಿ ವಿಭಾಗದ ಫ್ರೀಸ್ಟೈಲ್ ಪಂದ್ಯದಲ್ಲಿ ಪುನಿಯಾ ಕಜಕಿಸ್ತಾನದ ದೌಲತ್ ನಿಯಾಜ್‌ಬೆಕೋವ್ ವಿರುದ್ಧ 8-0 ಅಂತರದ ಭರ್ಜರಿ ಗೆಲುವು ಸಾಧಿಸಿದರು.ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಇದು 6ನೇ ಪದಕವಾಗಿದೆ.

ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಕುಸ್ತಿಪಟು ಬಜರಂಗ್ ಪುನಿಯಾ ಅವರಿಗೆ ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದಾರೆ.

ಟೋಕಿಯೋದಿಂದ ಸಂತೋಷಕರ ಸುದ್ದಿ ಬಂದಿದ್ದು, ಭಾರತಕ್ಕೆ ಕಂಚಿನ ಪದಕ ಒಲಿದಿದೆ. ಭಜರಂಗ ಪುನಿಯಾ ಅದ್ಭುತವಾಗಿ ಹೋರಾಡಿದ್ದಾರೆ. ನಿಮ್ಮ ಸಾಧನೆ ಗಾಗಿ ನಿಮಗೆ ಅಭಿನಂದನೆಗಳು, ಇದು ಪ್ರತಿಯೊಬ್ಬ ಭಾರತೀಯ ನಿಗೂ ಹೆಮ್ಮೆ ಮತ್ತು ಸಂತೋಷವನ್ನು ನೀಡುತ್ತದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.