Friday, 18th October 2024

ಹಿಂದೂ ದೇವಸ್ಥಾನದ ಮೇಲೆ ದಾಳಿ: 50 ಮಂದಿ ಬಂಧನ

ಲಾಹೋರ್‌: ಪಂಜಾಬ್‌ ಪ್ರಾಂತ್ಯದಲ್ಲಿನ ಹಿಂದೂ ದೇವಸ್ಥಾನದ ಮೇಲೆ ನಡೆದ ದಾಳಿಗೆ ಸಂಬಂಧಿಸಿ ಪೊಲೀಸ್‌ ಇಲಾಖೆ 50ಕ್ಕೂ ಹೆಚ್ಚು ಜನರನ್ನು ಶನಿವಾರ ಬಂಧಿಸಿದೆ.

150ಕ್ಕೂ ಹೆಚ್ಚು ಜನರ ವಿರುದ್ಧ ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಪಂಜಾಬ್‌ ಪ್ರಾಂತ್ಯದ ಮುಖ್ಯಮಂತ್ರಿ ಉಸ್ಮಾನ್‌ ಬುಜ್ದಾರ್‌ ಟ್ವೀಟ್‌ ಮಾಡಿದ್ದಾರೆ.

ರಹೀಮ್‌ ಯಾರ್ ಖಾನ್‌ ಜಿಲ್ಲೆಯ ಭೋಂಗ್‌ ಪಟ್ಟಣದಲ್ಲಿ ಬುಧವಾರ ಈ ಘಟನೆ ನಡೆದಿತ್ತು. ಸ್ಥಳೀಯ ಧಾರ್ಮಿಕ ಶಾಲೆಯೊಂದರಲ್ಲಿ 8 ವರ್ಷದ ಹಿಂದೂ ಬಾಲಕ ನೊಬ್ಬ ಮೂತ್ರ ವಿಸರ್ಜನೆ ಮಾಡಿದ್ದ ಎಂದು ಆರೋಪಿಸಲಾಗಿತ್ತು. ಬಾಲಕನನ್ನು ಬಂಧಿಸಿದ್ದ ಅಧಿಕಾರಿಗಳು ನಂತರ ಬಿಡುಗಡೆ ಮಾಡಿದ್ದರು.

ಬಾಲಕನನ್ನು ಬಿಡುಗಡೆ ಮಾಡಿದ್ದನ್ನು ವಿರೋಧಿಸಿದ್ದ ಗುಂಪೊಂದು, ಸ್ಥಳೀಯ ದೇವಸ್ಥಾನದ ಮೇಲೆ ದಾಳಿ ಮಾಡಿತ್ತು.

ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಗುಲ್ಜಾರ್‌ ಅಹ್ಮದ್‌ಘಟನೆಯನ್ನು ಖಂಡಿಸಿದ್ದರಲ್ಲದೇ, ಪೊಲೀಸರಿಗೆ ಛೀಮಾರಿ ಹಾಕಿದ್ದರು.