Thursday, 19th September 2024

ಗೋಲ್‌ಕೀಪರ್ ಶ್ರೀಜೇಶ್’ಗೆ ಉದ್ಯಮಿಯಿಂದ ₹1 ಕೋಟಿ ನಗದು ಬಹುಮಾನ

ತಿರುವನಂತಪುರ: ಪುರುಷ ಹಾಕಿಯಲ್ಲಿ 41 ವರ್ಷಗಳ ಬಳಿಕ ಭಾರತ ಪದಕ ಗೆಲ್ಲುವಲ್ಲಿ ನಿರ್ಣಾಯಕ ಪಾತ್ರ ವಹಿಸಿ ರುವ ಕೇರಳದ ಗೋಲ್‌ಕೀಪರ್ ಪಿ.ಆರ್. ಶ್ರೀಜೇಶ್ ಅವರಿಗೆ ದುಬೈ ಮೂಲದ ಉದ್ಯಮಿ, ₹1 ಕೋಟಿ ನಗದು ಬಹುಮಾನ ಘೋಷಿಸಿದ್ದಾರೆ.

ವಿಪಿಎಸ್ ಹೆಲ್ತ್‌ಕೇರ್ ಮುಖ್ಯಸ್ಥ, ವ್ಯವಸ್ಥಾಪಕ ನಿರ್ದೇಶಕ ಡಾ. ಶಂಸೀರ್ ವಯಲಿಲ್ ಅವರು, ಶ್ರೀಜೇಶ್ ಅವರಿಗೆ ನಗದು ಬಹುಮಾನ ಘೋಷಿಸಿದ್ದಾರೆ.

‘ಒಲಿಂಪಿಕ್ಸ್‌ನಲ್ಲಿ ಭಾರತ ಕಂಚಿನ ಪದಕ ಗೆಲ್ಲುವಲ್ಲಿ ಶ್ರೀಜೇಶ್ ಮಹತ್ತರ ಪಾತ್ರ ವಹಿಸಿದ್ದಾರೆ. ಭಾರತೀಯ ಹಾಕಿ ಕ್ರೀಡೆಗೆ ಅವರ ಕೊಡುಗೆಯನ್ನು ಗುರುತಿಸಿ ನಗದು ಬಹುಮಾನ ಘೋಷಿಸಲು ಸಂತಸಪಡುತ್ತೇವೆ ಎಂದು ದುಬೈ ಯಲ್ಲಿ ನೆಲೆಸಿರುವ ಕೇರಳದ ಉದ್ಯಮಿ ತಿಳಿಸಿದ್ದಾರೆ.

ಮೂರನೇ ಸ್ಥಾನಕ್ಕಾಗಿ ನಡೆದ ಪಂದ್ಯದಲ್ಲಿ ಜರ್ಮನಿ ವಿರುದ್ಧ 5-4 ಗೋಲುಗಳಿಂದ ಗೆಲುವು ದಾಖಲಿಸಿದ ಭಾರತದ ಹಾಕಿ ತಂಡವು 41 ವರ್ಷಗಳ ಬಳಿಕ ಪದಕ ಜಯಿಸಿತ್ತು.

ಜರ್ಮನಿ ವಿರುದ್ಧದ ಪಂದ್ಯದಲ್ಲೂ ಪಂದ್ಯ ಕೊನೆಗೊಳ್ಳಲು ಕೇವಲ ಆರು ಸೆಕೆಂಡುಗಳು ಮಾತ್ರ ಬಾಕಿ ಇರುವಾಗ ಅದ್ಭುತ ಸೇವ್ ಮಾಡಿ ಭಾರತಕ್ಕೆ ಕಂಚಿನ ಪದಕ ಗೆಲ್ಲುವಲ್ಲಿ ನೆರವಾಗಿದ್ದರು.