ನವದೆಹಲಿ: ‘ಆತ್ಮನಿರ್ಭರ ನಾರಿಶಕ್ತಿ ಸೆ ಸಂವಾದ್’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಭಾಗಿಯಾಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಈ ವೇಳೆ, ದೇಶದ ಸ್ವಸಹಾಯ ಗುಂಪಿನ ಮಹಿಳೆಯರ ಯಶೋಗಾಥೆಗಳ ಸಂಗ್ರಹವನ್ನು ಬಿಡುಗಡೆಗೊಳಿಸಲಿದ್ದಾರೆ’ ಎಂದು ಪ್ರಧಾನಿ ಕಚೇರಿ ತಿಳಿಸಿದೆ.
ದೀನದಯಾಳ್ ಅಂತ್ಯೋದಯ ಯೋಜನೆ- ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್‌ನಡಿಯಲ್ಲಿ(ಡಿಎವೈ-ಎನ್‌ಆರ್‌ಎಲ್‌ಎಂ) ಬರುವ ಮಹಿಳಾ ಸ್ವ ಸಹಾಯ ಸಂಘಗಳ (ಎಸ್‌ಎಚ್‌ಜಿ) ಸದಸ್ಯರೊಂದಿಗೆ ಪ್ರಧಾನಿ ಅವರು ವಿಡೀಯೊ ಕಾನ್ಫರೆನ್ಸ್ ಮೂಲಕ ಮಾತುಕತೆ ನಡೆಸಲಿದ್ದಾರೆ.
4 ಲಕ್ಷ ಸ್ವಸಹಾಯ ಸಂಘಗಳಿಗೆ ₹1,625 ಕೋಟಿವರೆಗೆ ಬಂಡವಾಳ ಬೆಂಬಲ ನಿಧಿ ಬಿಡುಗಡೆ ಮಾಡಲಿದ್ದಾರೆ ಎಂದು ಪ್ರಧಾನಿ ಕಚೇರಿ ಪ್ರಕಟಣೆ ಹೇಳಿದೆ.