Saturday, 23rd November 2024

ಅಶ್ಲೀಲ ಚಿತ್ರ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ

ಮುಂಬೈ: ಅಶ್ಲೀಲ ಚಿತ್ರ ಪ್ರಕರಣದ ತನಿಖೆಗಾಗಿ ಪ್ರಮುಖ ಆರೋಪಿ ಬಾಲಿವುಡ್ ನಟ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಮುಂಬೈ ಪೊಲೀಸ್ ಅಪರಾಧ ವಿಭಾಗವು ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.

ಸಹಾಯಕ ಪೊಲೀಸ್ ಆಯುಕ್ತರ (ಎಸಿಪಿ) ಶ್ರೇಣಿಯ ಅಧಿಕಾರಿಯೊಬ್ಬರು ಪ್ರಕರಣದಲ್ಲಿ ಎಸ್‌ಐಟಿ ತಂಡವನ್ನು ಮುನ್ನಡೆಸಲಿದ್ದಾರೆ. ಹೊಸದಾಗಿ ರೂಪುಗೊಂಡ ಎಸ್‌ಐಟಿ ಅಶ್ಲೀಲ ಚಿತ್ರ ಪ್ರಕರಣದಲ್ಲಿ ಪ್ರತ್ಯೇಕವಾಗಿ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ತನಿಖೆ ಮಾಡಲಿದೆ.

ಅಶ್ಲೀಲ ಚಿತ್ರಗಳ ನಿರ್ಮಾಣ ಆರೋಪದ ಮೇಲೆ ಜುಲೈ 19 ರಂದು ಉದ್ಯಮಿ ರಾಜ್ ಕುಂದ್ರಾ ಅವರನ್ನು ಇತರೆ 11 ಜನರೊಂದಿಗೆ ಬಂಧಿಸಲಾಗಿತ್ತು. ಉದ್ಯಮಿ ರಾಜ್ ಕುಂದ್ರಾ ಮತ್ತು ರಯಾನ್ ಥಾರ್ಪೆ ಅವರು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ರಿಮಾಂಡ್ ಆದೇಶವನ್ನು ಪ್ರಶ್ನಿಸಿ ಮತ್ತು ಅಶ್ಲೀಲ ಪ್ರಕರಣಕ್ಕೆ ಸಂಬಂಧಿಸಿ ದಂತೆ ತಕ್ಷಣ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಬಾಂಬೆ ಹೈಕೋರ್ಟ್ ಕಳೆದ ಶನಿವಾರ ವಜಾಗೊಳಿಸಿತ್ತು.