ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಸೋಮವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ರಾಜ್ಯಪಾಲ ತಾವರ ಚಂದ್ ಗೆಹ್ಲೋತ್ , ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ , ಸಂಸದರಾದ ಪಿ.ಸಿ.ಮೋಹನ್ ಉಪಸ್ಥಿತರಿದ್ದರು.