Saturday, 23rd November 2024

ಇಂದಿನಿಂದ ಪೂರಿ ಜಗನ್ನಾಥನ ದರ್ಶನಕ್ಕೆ ಅವಕಾಶ

ಪುರಿ: ಕರೋನಾ ಆತಂಕದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಹಂತಹಂತವಾಗಿ ಪೂರಿ ಜಗನ್ನಾಥನ ದರ್ಶನ ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ.

ಒಡಿಶಾದಲ್ಲಿ ಎರಡನೇ ಹಂತದ ಅನ್ಲಾಕ್ ಪ್ರಕ್ರಿಯೆ ಜಾರಿಯಲ್ಲಿದೆ. ಆ.23ರಿಂದ ಸ್ಥಳೀಯ ಸಾರ್ವಜನಿಕರಿಗೆ ಪುರಿ ಜಗನ್ನಾಥನ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಆ.12ರಿಂದ ಮೊದಲ ಹಂತದಲ್ಲಿ ದೇವರ ದರ್ಶನಕ್ಕೆ ಆಡಳಿತ ಮಂಡಳಿ ಅವಕಾಶ ಮಾಡಿಕೊಟ್ಟಿತ್ತು. ದೇವಸ್ಥಾನದ ಸಿಬ್ಬಂದಿ ಮತ್ತು ಸುತ್ತಲಿನ ಸ್ಥಳೀಯರಿಗೆ ಮಾತ್ರವೇ ಅವಕಾಶ ನೀಡಲಾಗಿತ್ತು.

ಆ.16 ರಿಂದ 20 ರವರೆಗೆ ಬೆಳಗ್ಗೆ 7ರಿಂದ ರಾತ್ರಿ 7 ರ ವರೆಗೆ ದೇವರ ದರ್ಶನಕ್ಕೆ ಅವಕಾಶ ಒದಗಿಸಲಾಗುತ್ತಿದೆ. ಆಗಸ್ಟ್ 4ರಂದು ಆಡಳಿತ ಮಂಡಳಿಯ ಮಹತ್ವದ ಸಭೆ ನಡೆದಿದ್ದು, ಸಾರ್ವಜನಿಕರಿಂದ ದರ್ಶನಕ್ಕೆ ಒತ್ತಾಯ ಹೆಚ್ಚಾದ ಹಿನ್ನೆಲೆಯಲ್ಲಿ ಮಂದಿರದಲ್ಲಿ ದರ್ಶನಕ್ಕೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ.

ಕರೋನಾ ಎರಡನೇ ಅಲೆಯ ದಾಳಿಯ ಹಿನ್ನೆಲೆಯಲ್ಲಿ ಕಳೆದ ಏಪ್ರಿಲ್ 24ರಿಂದ ದೇವಸ್ಥಾನವನ್ನು ಬಂದ್ ಮಾಡಲಾಗಿತ್ತು.