ವಿಶ್ವವಾಣಿ ವರದಿ ಪರಿಣಾಮ
ಕೊಟ್ಟೂರು: ಪಟ್ಟಣದ ಯಾವುದೇ ಮಾರ್ಗವಾಗಿ ಸಂಚರಿಸಿದರೂ ಹದಗೆಟ್ಟ ರಸ್ತೆ ಗುಂಡಿಗಳದ್ದೇ ದರ್ಬಾರ್ ಆಗಿದೆ ಎಂದು ಆಗ ೧೧ರಂದು ವಿಶ್ವವಾಣಿ ಪತ್ರಿಕೆಯಲ್ಲಿ ವರದಿ ಪ್ರಕಟಿಸಲಾಗಿತ್ತು.
ವರದಿಯಿಂದ ಎಚ್ಚೆತ್ತ ಅಧಿಕಾರಿಗಳು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅಡ್ಡವಾಗಿದ್ದ ೨೪*೭ ಪೈಪ್ ಲೈನ್ ಕಾಮಗಾರಿ ಕೆಲಸ ಆರಂಭಿಸಿದ್ದಾರೆ. ಪತ್ರಿಕೆಯೊಂದಿಗೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಸರು ಆದೋನಿ ಮಾತನಾಡಿ, ಹಲವು ವರ್ಷಗಳಿಂದ ಆಮೆ ಗತಿಯಲ್ಲಿ ಕಾಮಗಾರಿ ಕೆಲಸ ಸಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿದ್ದವು. ಜೊತೆಗೆ ವಿಶ್ವವಾಣಿ ಪತ್ರಿಕೆಯಲ್ಲಿ ಈ ಸಮಸ್ಯೆ ಕುರಿತು ವರದಿಯನ್ನು ಪ್ರಕಟಿಸಲಾಗಿದ್ದು ಸಂಬಂಧಪಟ್ಟ ಅಧಿಕಾರಿಗಳಿಗೆ ಅತಿ ಬೇಗನೆ ಈ ಕೆಲಸ ಮುಗಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
೨೪*೭ ಕುಡಿಯುವ ನೀರು ಯೋಜನೆಯಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ವಿಳಂಬವಾಗಿತ್ತು. ಲೋಕೋಪ ಯೋಗಿ ಇಲಾಖೆಯಿಂದ ಅನುಮತಿ ಸಿಕ್ಕಿದ್ದು ಇನ್ನು ಎರಡು ತಿಂಗಳಲ್ಲಿ ಕೊಟ್ಟೂರು ಪಟ್ಟಣದಲ್ಲಿ ನಿರಂತರ ಕುಡಿಯುವ ನೀರು ಯೋಜನೆ ಆರಂಭವಾಗಲಿದೆ ಎಂದು ೨೪*೭ ಯೋಜನೆಯ ಸಹಾಯಕ ಇಂಜಿನಿಯರ್ ಶುಭಾಷ್ ಮಾಳಗಿ ಹೇಳಿದರು.
ಅತ್ಯಂತ ಪರಿಣಾಮಕಾರಿಯಾಗಿ ಪತ್ರಿಕೆಯಲ್ಲಿ ವರದಿ ಪ್ರಕಟಿಸಿದ್ದಕ್ಕೆ ಸಾರ್ವಜನಿಕರಿಂದ ಮತ್ತು ವಿವಿಧ ಸಂಘ ಸಂಸ್ಥೆಗಳು ಪತ್ರಿಕೆಗೆ ಶುಭ ಹಾರೈಸಿ ಅಭಿನಂದಿಸಿದ್ದಾರೆ.