ನವದೆಹಲಿ: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 36,571 ಹೊಸ ಪ್ರಕರಣಗಳು ದೃಢಪಟ್ಟಿದೆ.
ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,23,58,829ಕ್ಕೆ ಏರಿಕೆಯಾಗಿದೆ. ಗುರುವಾರ 36,401 ಹೊಸ ಪ್ರಕರಣಗಳು ದಾಖಲಾಗಿದ್ದವು.
ಕಳೆದ 150 ದಿನಗಳಲ್ಲಿ ಕಡಿಮೆ ಎನ್ನುವಂತೆ 3,63,605 ಸಕ್ರಿಯ ಪ್ರಕರಣಗಳಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 540 ಹೊಸ ಸಾವಿನ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ ಮೃತರ ಒಟ್ಟು ಸಂಖ್ಯೆ 4,33,589ಕ್ಕೆ ಏರಿಕೆಯಾಗಿದೆ.