Saturday, 23rd November 2024

ಒಬಿಸಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ

ನವದೆಹಲಿ: ರಾಜ್ಯಗಳಿಗೆ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳನ್ನು ಗುರುತಿಸಿ ಸೂಚಿಸುವ ಅಧಿಕಾರಗಳನ್ನು ಹಿಂತಿರುಗಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಕ್ರವಾರ ಸಹಿ ಹಾಕಿದ್ದಾರೆ.

ಆ.11 ರಂದು ಸಂಸತ್ ನಲ್ಲಿ ಮಸೂದೆಯನ್ನು ಅಂಗೀಕರಿಸಲಾಗಿತ್ತು. ಕಾನೂನು ಮತ್ತು ನ್ಯಾಯ ಸಚಿವಾಲಯ ಪ್ರಕಟಿಸುವ ಗೆಝೆಟ್ ನ ಪ್ರಕಾರ ಈ ಕಾಯ್ದೆ ಸಂವಿಧಾನದ ಉಪವಾಕ್ಯ (clause 9) ಅಡಿಯಲ್ಲಿನ ಆರ್ಟಿಕಲ್ 338 ಬಿಯನ್ನು ತಿದ್ದುಪಡಿ ಮಾಡಲಿದೆ ಎಂದು ಹೇಳಿತ್ತು.

ಈ ಮೂಲಕ ಪ್ರತಿ ರಾಜ್ಯ ಹಾಗೂ ಕೇಂದ್ರಾಡಳಿತ ಸಾಮಾಜಿಕ ಹಾಗೂ ಶೈಕ್ಷಣಿಕ ಹಿಂದುಳಿದ ವರ್ಗಗಳನ್ನು ಗುರುತಿಸಿ ಪಟ್ಟಿ ಸಿದ್ಧಪಡಿಸುವ ಅಧಿಕಾರವನ್ನು ಪಡೆಯಲಿದ್ದು ಕೇಂದ್ರದ ಪಟ್ಟಿಗಿಂತಲೂ ಭಿನ್ನವಾದ ಪಟ್ಟಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಉಭಯ ಸದನಗಳಲ್ಲೂ ಒಬಿಸಿ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದ್ದನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.