ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಸೇರಿದಂತೆ, ಗಣ್ಯರು ರಕ್ಷಾ ಬಂಧನದ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ‘ಪವಿತ್ರ ರಕ್ಷಾ ಬಂಧನದ ದಿನದ ಸಂದರ್ಭದಲ್ಲಿ ದೇಶದ ಜನರಿಗೆ ಶುಭಾಶಯಗಳು’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರೂ ರಕ್ಷಾ ಬಂಧನದ ಶುಭಾಶಯ ಕೋರಿದ್ದು, ಮಹಿಳೆಯರಿಗೆ ಸುರಕ್ಷಿತ ವಾತಾವರಣ ಇರುವಂತೆ ನೋಡಿಕೊಳ್ಳ ಬೇಕೆಂದು ಜನರನ್ನು ಒತ್ತಾಯಿಸಿದ್ದಾರೆ.
‘ರಕ್ಷಾ ಬಂಧನ ಹಬ್ಬವು ಅಣ್ಣ-ತಂಗಿಯರ ನಡುವಿನ ಪ್ರೀತಿ ಹಾಗು ಗೌರವದ ವಿಶೇಷ ಮತ್ತು ಆಳವಾದ ಬಾಂಧವ್ಯದ ಸಂಭ್ರಮಾಚರಣೆ. ಈ ಪವಿತ್ರ ದಿನದಂದು ಮಹಿಳೆಯರ ಘನತೆ ಎತ್ತಿ ಹಿಡಿಯುವ ಮತ್ತು ಅವರಿಗೆ ಸದಾ ಗೌರವ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸುವ ಸಂಕಲ್ಪ ಮಾಡೋಣ.’ ಎಂದು ನಾಯ್ಡು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.
‘ಪವಿತ್ರ ರಕ್ಷಾ ಬಂಧನದ ದಿನದಂದು ದೇಶವಾಸಿಗಳಿಗೆ ಶುಭಾಶಯಗಳು’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.