ನವದೆಹಲಿ: ದೆಹಲಿಯ ಎಎಪಿ ಸರ್ಕಾರದ ‘ದೇಶ್ ಕಾ ಮೆಂಟರ್ಸ್’ ಕಾರ್ಯಕ್ರಮದ ಬ್ರ್ಯಾಂಡ್ ರಾಯಭಾರಿಯನ್ನಾಗಿ ಬಾಲಿವುಡ್ ನಟ ಸೋನು ಸೋದ್ ಅವರನ್ನು ನೇಮಿಸಲಾಗಿದೆ ಎಂದು ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಶುಕ್ರವಾರ ತಿಳಿಸಿದ್ದಾರೆ.
ತಮ್ಮ ವೃತ್ತಿ ಜೀವನ ಆರಿಸುವಲ್ಲಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆರಂಭಿಸಲಾಗಿದೆ.
ಸರ್ಕಾರಿ ಶಾಲೆಯ ಬಹುತೇಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಕೆಲವೇ ಜನರಿರುತ್ತಾರೆ. ಹಾಗಾಗಿ ಈ ಮಕ್ಕಳಿಗೆ ಮಾರ್ಗದರ್ಶಕರಾಗುವಂತೆ ನಾವು ವಿದ್ಯಾವಂತರಲ್ಲಿ ಮನವಿ ಮಾಡು ತ್ತೇವೆ. ಈ ಕಾರ್ಯಕ್ರಮದ ಬ್ರ್ಯಾಂಡ್ ರಾಯಭಾರಿಯನ್ನಾಗಿ ಸೋನು ಸೂದ್ ಕಾರ್ಯ ನಿರ್ವಹಿಸು ವರು’ ಎಂದು ಹೇಳಿದ್ದಾರೆ.
ನಾವು ಕೇವಲ ಕಾರ್ಯಕ್ರಮದ ಕುರಿತಾಗಿ ಮಾತುಕತೆ ನಡೆಸಿದೆವು. ರಾಜಕೀಯಕ್ಕೆ ಸಂಬಂಧಿಸಿದಂತೆ ಯಾವುದೇ ವಿಚಾರವನ್ನು ಚರ್ಚಿಸಿಲ್ಲ’ ಎಂದು ಈ ಬಗ್ಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಸೋನು ಸೂದ್ ಹಾಗೂ ಕೇಜ್ರಿವಾಲ್ ಸ್ಪಷ್ಟನೆ ನೀಡಿದರು.