ಕಾಸರಗೋಡು: ಕರೋನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೇರಳದಲ್ಲಿ ಇಂದಿನಿಂದ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ.
ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆ ತನಕ ಕರ್ಫ್ಯೂ ಜಾರಿಯಲ್ಲಿರಲಿದೆ. ಅಗತ್ಯ ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ. ವ್ಯಾಪಾರ ಮಳಿಗೆಗಳು ರಾತ್ರಿ 10 ಗಂಟೆ ಮೊದಲು ಮುಚ್ಚಬೇಕು. ಅನಗತ್ಯವಾಗಿ ಒಡಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಪೊಲೀಸ್ ತಪಾಸಣೆ ತೀವ್ರ ಗೊಳಿಸಲು ತೀರ್ಮಾನಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.