ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದಿನಿಂದ ಸೆ.5ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಾಗಿದೆ. ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಲ್ಲಿ ಕೂಡ ಇನ್ನೆರಡು ದಿನ ಸಾಧಾರಣ, ಹಾಗೂ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.