Friday, 20th September 2024

ತ್ರಿಪುರಾದಲ್ಲಿ ಟಿಎಂಸಿ ರೋಡ್‌ ಶೋ: ಅಭಿಷೇಕ್‌ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಇದೇ ತಿಂಗಳ 15 ರಂದು ತ್ರಿಪುರಾದಲ್ಲಿ ನಡೆಯಲಿರುವ ತೃಣಮೂಲ ಕಾಂಗ್ರೆಸ್‌ನ ರೋಡ್‌ ಶೋ ಅನ್ನು ಸಂಸದ ಅಭಿಷೇಕ್‌ ಬ್ಯಾನರ್ಜಿ ಮುನ್ನಡೆಸ ಲಿದ್ದಾರೆ.

‘ತ್ರಿಪುರಾ ರಾಜಧಾನಿ ಅಗರ್ತಲಾದಲ್ಲಿ ನಡೆಯಲಿರುವ ರೋಡ್‌ ಶೋಗೆ ಅಭಿಷೇಕ್‌ ಬ್ಯಾನರ್ಜಿ ನೇತೃತ್ವ ವಹಿಸಲಿದ್ದಾರೆ’ ಎಂದು ತೃಣಮೂಲ ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಕುನಾಲ್ ಘೋಷ್ ಹೇಳಿದ್ದಾರೆ. ಬಿಜೆಪಿಯ ಆಡಳಿತವಿರುವ ತ್ರಿಪುರಾದಲ್ಲಿ ಇತ್ತೀಚೆಗೆ ಅಭಿಷೇಕ್‌ ಸೇರಿದಂತೆ ಟಿಎಂಸಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿತ್ತು.

ತ್ರಿಪುರಾದಲ್ಲಿ ಬಿಜೆಪಿಯ ವಿರೋಧ ಮೆಟ್ಟಿ ತೃಣಮೂಲ ಕಾಂಗ್ರೆಸ್ ವಿಧಾನಸಭಾ ಚುನಾವಣೆ ಗೆಲ್ಲುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿಪಾದಿಸಿದ್ದಾರೆ. ತ್ರಿಪುರಾದಲ್ಲಿ ಟಿಎಂಸಿ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆದರೆ ದೆಹಲಿಯಲ್ಲಿ ಪರಿಣಾಮ ಉಂಟಾಗುತ್ತದೆ ಎಂದೂ ಅವರು ಎಚ್ಚರಿಸಿದ್ದಾರೆ. ತ್ರಿಪುರಾ ವಿಧಾನಸಭೆಗೆ 2023ರಲ್ಲಿ ಚುನಾವಣೆಗಳು ನಡೆಯುವ ಸಾಧ್ಯತೆಗಳಿವೆ.