ಅಹಮದಾಬಾದ್: ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ಶನಿವಾರ ರಾಜೀನಾಮೆ ನೀಡಿದ್ದಾರೆ.
ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ತಮ್ಮ ರಾಜೀನಾಮೆಯನ್ನು ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಗೆ ಸಲ್ಲಿಸಿದ್ದಾರೆ. ರೂಪಾನಿಯವರು ನಾಲ್ವರು ಸಚಿವರ ಜೊತೆಗಿದ್ದರು.
ಈ ಹಿಂದೆ, ಗುಜರಾತ್ ಸರ್ಕಾರದಲ್ಲಿ ನಾಯಕತ್ವದ ಬದಲಾವಣೆಯ ಬಗ್ಗೆ ಊಹಾಪೋಹಗಳ ನಡುವೆ, ಆಡಳಿತಾರೂಢ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಸಿ ಆರ್ ಪಾಟೀಲ್ ಅವರು ಮುಖ್ಯ ಮಂತ್ರಿ ವಿಜಯ ರೂಪಾನಿ ಮತ್ತು ಅವರ ಉಪ ನಿತಿನ್ ಪಟೇಲ್ ನೇತೃತ್ವದಲ್ಲಿ ಮುಂದಿನ ವರ್ಷದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಹೇಳಿದ್ದರು.
ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ರೂಪಾನಿ ಸಧ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾರನ್ನ ಭೇಟಿಯಾದ ರೂಪಾನಿ, ತಮ್ಮ ರಾಜೀನಾಮೆ ಪತ್ರವನ್ನ ಸಲ್ಲಿಸಿದ್ದಾರೆ. ಇನ್ನು ಮುಂದಿನ ವರ್ಷ ವಿಧಾನ ಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನವೇ ರಾಜೀನಾಮೆ ನೀಡಿದ್ದಾರೆ.