Thursday, 19th September 2024

ನೀಟ್ ಪರೀಕ್ಷೆ ಭೀತಿ: ವಿದ್ಯಾರ್ಥಿ ಆತ್ಮಹತ್ಯೆ

ಚೆನ್ನೈ : ವೈದ್ಯಕೀಯ ಕೋರ್ಸ್ ಪ್ರವೇಶಕ್ಕಾಗಿರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಗೆ ತಯಾರಿ ನಡೆಸಿದ್ದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮಿಳುನಾಡಿನ ಸಲೆಮ್ ಎಂಬಲ್ಲಿ ಭಾನುವಾರ ಬೆಳಿಗ್ಗೆ ಘಟನೆ ಸಂಭವಿಸಿದೆ.

ಪರೀಕ್ಷೆಯ ದಿನವೇ 19 ವರ್ಷ ವಯಸ್ಸಿನ ಧನುಷ್ ತನ್ನ ರೂಮಿನಲ್ಲಿ ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾಗಿದ್ದಾನೆ. ಡಾಕ್ಟರ್ ಆಗಬೇಕೆಂದು ಕನಸು ಕಂಡಿದ್ದ ವೈದ್ಯಕೀಯ ಸೀಟ್ ಪಡೆಯಲೆಂದು ನೀಟ್ ಪರೀಕ್ಷೆಗೆ ತಯಾರಿ ನಡೆಸಿದ್ದ. ಈ ಹಿಂದೆ ಎರಡು ಬಾರಿ ಪರೀಕ್ಷೆ ಪಾಸಾಗಿರಲಿಲ್ಲ. ಈ ಬಾರಿಯಾದರೂ ಎಕ್ಸಾಂ ತೇರ್ಗಡೆಯಾಗಬೇಕೆಂಬ ಮನೆಯವರ ಒತ್ತಡದಿಂದ ಭಯಗೊಂಡ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಆತ ಮಾನಸಿಕ ಒತ್ತಡದಲ್ಲಿದ್ದ ಎಂದು ಆತನ ಪೋಷಕರು ಪೊಲೀಸರು ಎದುರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನು ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಇರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯು ಭಾನುವಾರ ನಡೆಯುತ್ತಿದೆ. ಕೋವಿಡ್-19 ಪಿಡುಗಿನ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಮಂಡಳಿಯು (ಎನ್‌ಟಿಎ) ಪರೀಕ್ಷೆಯನ್ನು ಸೆಪ್ಟೆಂಬರ್ 12ಕ್ಕೆ ಮುಂದೂ ಡಿತ್ತು. 16 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆಯುತ್ತಿದ್ದು, ಕೆಲವು ವಿದ್ಯಾರ್ಥಿಗಳ ಮನವಿಯ ಮೇರೆಗೆ ಪರೀಕ್ಷೆ ಮುಂದೂಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶದಲ್ಲಿ ತಿಳಿಸಿತ್ತು.

Leave a Reply

Your email address will not be published. Required fields are marked *