Friday, 22nd November 2024

ಪ್ರಮಾಣ ವಚನ ಸ್ವೀಕರಿಸಿದ ನೂತನ ಸಿಎಂ ಭೂಪೇಂದ್ರ ಪಟೇಲ್

ಅಹಮದಾಬಾದ್: ಬಿಜೆಪಿ ಹಿರಿಯ ನಾಯಕ ಭೂಪೇಂದ್ರ ಪಟೇಲ್ ಅವರು ಗುಜರಾತ್ ಮುಖ್ಯ ಮಂತ್ರಿಯಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಆಚಾರ್ಯ ದೇವ್ ವ್ರತ್ ಅವರು ಪ್ರಮಾಣ ವಚನ ಬೋಧಿಸಿದರು.

ಪ್ರಮಾಣವಚನ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಅಮಿತ್‌ ಶಾ, ಪ್ರಹ್ಲಾದ್‌ ಜೋಷಿ ಸೇರಿ ಗೋವಾ ಮತ್ತು ಹರಿಯಾಣ ಮುಖ್ಯಮಂತ್ರಿಗಳು ಭಾಗಿಯಾಗಿ ದ್ದಾರೆ.

ರಾಜ್ಯ ಚುನಾವಣೆಗೆ ಒಂದು ವರ್ಷ ಮೊದಲು ವಿಜಯ್ ರೂಪಾನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ದಿನದ ನಂತರ ಪಟೇಲ್ (59) ಅವರು ಭಾನುವಾರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆಯಾದರು.