Friday, 22nd November 2024

ತ್ರಿವರ್ಣ ಧ್ವಜಕ್ಕೆ ಅವಮಾನ: ಜೆ.ಪಿ.ನಡ್ಡಾ ವಿರುದ್ಧ ಪ್ರಕರಣ ದಾಖಲು

ಮುಜಾಫರ್‌ನಗರ: ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸುವಾಗ ತ್ರಿವರ್ಣ ಧ್ವಜಕ್ಕೆ ಅವಮಾನಿಸಿದ ಆರೋಪದ ಮೇಲೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ವಿರುದ್ಧ ಪ್ರಕರಣ ದಾಖಲಾಗಿದೆ.

ಲಖನೌದಲ್ಲಿ ಆಗಸ್ಟ್ 22ರಂದು ಕಲ್ಯಾಣ್ ಸಿಂಗ್ ಅವರ ಅಂತ್ಯಕ್ರಿಯೆಗೂ ಮುನ್ನ ಪಾರ್ಥಿವ ಶರೀರದ ಮೇಲೆ ಹೊದಿಸಿದ್ದ ರಾಷ್ಟ್ರ ಧ್ವಜದ ಮೇಲೆ ಅಧ್ಯಕ್ಷರು ಬಿಜೆಪಿ ಧ್ವಜವನ್ನು ಇಟ್ಟಿದ್ದು ಅವರು ತ್ರಿವರ್ಣ ಧ್ವಜಕ್ಕೆ ಮಾಡಿದ ಅಗೌರವ ಎಂದು ಆರೋಪಿಸಿ ಸಿಕಂದರ್‌ಪುರದ ನಿವಾಸಿ ಚಂದ್ರ ಕಿಶೋರ್ ಮುಜಾಫರ್‌ಪುರ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನಡ್ಡಾ ಅವರ ಈ ಕೃತ್ಯವು ರಾಷ್ಟ್ರ ಧ್ವಜಕ್ಕೆ ಮಾಡಿದ ಅವಮಾನ” ಎಂದು ಅರ್ಜಿದಾರರು ದೂರಿನಲ್ಲಿ ತಿಳಿಸಿದ್ದಾರೆ. ಅಲ್ಲದೆ ಸಂಬಂಧಪಟ್ಟ ಕೆಲ ಚಿತ್ರಗಳನ್ನು ಸಹ ಸಲ್ಲಿಸಿದ್ದಾರೆ.