Friday, 22nd November 2024

ಈ ರಾಜ್ಯದಲ್ಲಿ ಸೆ.20ರಿಂದ ಒಂದರಿಂದ ಐದನೇ ತರಗತಿ ಆರಂಭ !

ಭೋಪಾಲ್: ಒಂದರಿಂದ ಐದನೇ ತರಗತಿಗಳನ್ನು ಸೆ.20 ರಿಂದ 50 ರಷ್ಟು ಹಾಜರಾತಿಯೊಂದಿಗೆ ಆರಂಭಿಸಲು ಮಧ್ಯಪ್ರದೇಶ ಸರ್ಕಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಶಾಲೆ ತೆರೆಯುವ ಸಂದರ್ಭ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ನಿರ್ದೇಶನ ನೀಡಲಾಗಿದೆ. ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಬಯಸದಿದ್ದರೆ ಆನ್ಲೈನ್ ತರಗತಿಗಳನ್ನು ಮುಂದುವರೆಸಬೇಕೆಂದು ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ಹೇಳಿದ್ದಾರೆ.

8ನೇ ತರಗತಿ ಮೇಲ್ಪಟ್ಟ ತರಗತಿ, ಹಾಸ್ಟೆಲ್, ವಸತಿ ಶಾಲೆಗಳನ್ನು ಶೇ.100 ರಷ್ಟು ಹಾಜರಾತಿಯೊಂದಿಗೆ ಆರಂಭಿಸಲು ಸೂಚನೆ ನೀಡಲಾಗಿದೆ. ಎಲ್ಲಾ ಶಾಲಾ ಸಿಬ್ಬಂದಿಗಳಿಗೆ ಕರೋನಾ ಲಸಿಕೆ ಹಾಕಲು ತಿಳಿಸ ಲಾಗಿದೆ ಸೋಂಕು ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಶಾಲೆ ಆರಂಭಿಸಲು ಕ್ರಮ ಕೈಗೊಂಡಿದೆ ಎಂದು ಅಧಿಕಾರಿ ಹೇಳಿದ್ದಾರೆ.