Friday, 22nd November 2024

ಬ್ಯಾಂಕ್ ಅಧಿಕಾರಿಗಳ ಯಡವಟ್ಟು: ವಿದ್ಯಾರ್ಥಿಗಳ ಖಾತೆಗೆ 900 ಕೋಟಿ ರೂಪಾಯಿ ಜಮೆ !

ಪಾಟ್ನಾ: ಬ್ಯಾಂಕ್ ಅಧಿಕಾರಿಗಳ ಯಡವಟ್ಟಿನಿಂದ ಬಿಹಾರದ ಕಟಿಹಾರ್ ಜಿಲ್ಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ 900 ಕೋಟಿ ರೂಪಾಯಿಗೆ ಜಮೆ ಆಗಿರುವುದು ಇಡೀ ಗ್ರಾಮಸ್ಥರಲ್ಲಿ ಅಚ್ಚರಿ ಮೂಡಿಸಿದೆ.

ಗುರುಚಂದ್ರ ಪ್ರಸಾದ್ ಮತ್ತು ಆಶಿತ್ ಕುಮಾರ್ ಎಂಬ ಇಬ್ಬರು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಬರೋಬ್ಬರಿ 900 ಕೋಟಿಗೂ ಅಧಿಕ ರೂಪಾಯಿ ಜಮೆ ಆಗಿರುವುದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಕ್ಕೆ ತೆರಳಿದ ವೇಳೆ ಈ ಬಗ್ಗೆ ತಿಳಿದು ಬಂದಿದೆ.

ಬಿಹಾರದ ಇಬ್ಬರು ವಿದ್ಯಾರ್ಥಿಗಳ ಖಾತೆಗೆ ರಾಜ್ಯ ಸರ್ಕಾರದಿಂದಲೇ 900 ಕೋಟಿ ರೂಪಾಯಿ ಜಮೆ ಆಗಿದೆ. ವಿದ್ಯಾರ್ಥಿಗಳ ಶಾಲಾ ಸಮವಸ್ತ್ರಕ್ಕಾಗಿ ಇಷ್ಟೊಂದು ದೊಡ್ಡ ಪ್ರಮಾಣದ ಹಣ ಜಮೆ ಆಗಿರುವುದು ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಯಲ್ಲಿನ ಮೊತ್ತ ತಿಳಿದುಕೊಳ್ಳಲು ತೆರಳಿದ ಸಂದರ್ಭದಲ್ಲಿ ತಿಳಿದುಬಂದಿದೆ.

ಬಿಹಾರ ಕಟಿಯಾರ್ ಜಿಲ್ಲೆಯ ಬಗೌರಾ ಪಂಚಾಯಿತಿ ವ್ಯಾಪ್ತಿಯ ಪಸ್ತಿಯಾ ಗ್ರಾಮದ ಇಬ್ಬರು ವಿದ್ಯಾರ್ಥಿಗಳ ಖಾತೆಗೆ 960 ಕೋಟಿ ರೂಪಾಯಿ ಜಮೆ ಆಗಿದೆ. ಗುರುಚಂದ್ರ ವಿಶ್ವಾಸ್ ಎಂಬ ವಿದ್ಯಾರ್ಥಿ ಖಾತೆಗೆ 60 ಕೋಟಿಗೂ ಅಧಿಕ ಹಣ, ಆಶಿತ್ ಕುಮಾರ್ ಬ್ಯಾಂಕ್ ಖಾತೆಗೆ 900 ಕೋಟಿಗೂ ಅಧಿಕ ಹಣ ಜಮೆ ಆಗಿದೆ. ಈ ಇಬ್ಬರು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಯು ಉತ್ತರ ಬಿಹಾರ ಗ್ರಾಮೀಣ ಬ್ಯಾಂಕಿನ ಭೆಲಗಂಜ್ ಶಾಖೆಯಲ್ಲಿದೆ.

960 ಕೋಟಿಗೂ ಹೆಚ್ಚು ಹಣ ಜಮೆ ಆಗಿರುವ ಬಗ್ಗೆ ಸ್ವತಃ ಬ್ಯಾಂಕ್ ಅಧಿಕಾರಿಗಳಲ್ಲಿಯೇ ಗೊಂದಲ ಸೃಷ್ಟಿಸಿದೆ. ಬ್ಯಾಂಕ್ ಮ್ಯಾನೇಜರ್ ಮನೋಜ್ ಗುಪ್ತಾ, ಎರಡೂ ಮಕ್ಕಳ ಖಾತೆಯಿಂದ ಪಾವತಿ ನಿಲ್ಲಿಸಲಾಗಿದೆ. ಈ ವಿಷಯವು ತನಿಖೆಯಲ್ಲಿದೆ ಎಂದು ಹೇಳಿದರು.

ಬಿಹಾರದಲ್ಲಿ ಇತ್ತೀಚಿಗೆ ಖಗಾರಿಯಾ ಗ್ರಾಮೀಣ ಬ್ಯಾಂಕಿನಲ್ಲಿ ಖಾತೆ ಹೊಂದಿರುವ ಬಖ್ತಿಯಾರ್ಪುರ್ ಗ್ರಾಮದ ನಿವಾಸಿ ಖಾತೆಗೆ 5.5 ಲಕ್ಷ ರೂಪಾಯಿ ಜಮೆ ಆಗಿದೆ. ಬ್ಯಾಂಕ್ ಲೋಪದಿಂದಾಗಿ ರಂಜಿತ್ ದಾಸ್ ಖಾತೆಗೆ 5.5 ಲಕ್ಷ ರೂಪಾಯಿ ಜಮೆ ಆಗಿರುವುದನ್ನು ಅರಿತುಕೊಂಡ ಬ್ಯಾಂಕ್ ಸಿಬ್ಬಂದಿ ಅದನ್ನು ವಾಪಸ್ ನೀಡುವಂತೆ ಕೋರಿದ್ದಾರೆ. ಆದರೆ ಹಣ ವಾಪಸ್ ನೀಡುವುದಕ್ಕೆ ತಿರಸ್ಕರಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಈ ಹಿಂದೆ ಹೇಳಿದಂತೆ ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂಪಾಯಿ ಹಾಕುವುದರ ಭಾಗವಾಗಿ ಮೊದಲ ಕಂತಿನಲ್ಲಿ ಇಷ್ಟೊಂದು ಹಣವನ್ನು ಕಳುಹಿಸಿದ್ದಾರೆ ಎಂದು ತಿಳಿದುಕೊಂಡಿದ್ದೆನು. ನಾನು ಎಲ್ಲ ಹಣವನ್ನು ಖರ್ಚು ಮಾಡಿದ್ದು, ಇದೀಗ ನನ್ನ ಬ್ಯಾಂಕ್ ಖಾತೆಯಲ್ಲಿ ಹಣವಿಲ್ಲ. ಬ್ಯಾಂಕ್ ಖಾತೆಗೆ ತುಂಬಲು ಅಥವಾ ಅಧಿಕಾರಿಗಳಿಗೆ ನೀಡಲು ಈಗ ನನ್ನ ಬಳಿ ಹಣವೇ ಇಲ್ಲ,” ಎಂದು ರಂಜಿತ್ ದಾಸ್ ಹೇಳಿಕೆ ನೀಡಿದ್ದರು.