Saturday, 23rd November 2024

ಜಪಾನ್ ನಲ್ಲಿ ಪ್ರಬಲ ಭೂಕಂಪನ: 6.0 ತೀವ್ರತೆ

ಜಪಾನ್ : ತಡರಾತ್ರಿ ಜಪಾನ್ ನಲ್ಲಿ ಪ್ರಬಲ ಭೂಕಂಪನ ಸಂಭವಿಸಿ, ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಹೇಳಿದೆ.

ಜಪಾನ್‌ನಲ್ಲಿ ಸೋಮವಾರ ತಡರಾತ್ರಿ 1:55ರ ಸುಮಾರಿಗೆ 6.0 ತೀವ್ರತೆಯ ಭೂಕಂಪ ಸಂಭವಿ ಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಹೇಳಿದೆ. ಭೂಕಂಪವು ಟೋಕಿಯೋದಿಂದ 1,593 ಕಿ.ಮೀ ದೂರದಲ್ಲಿರುವ ಪ್ರದೇಶದಲ್ಲಿ 10 ಕಿ.ಮೀ ಆಳದಲ್ಲಿ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಇನ್ನು ಸೋಮವಾರ ರಾತ್ರಿ 8.30 ರ ಸುಮಾರಿಗೆ ರಷ್ಯಾದ ಕುರಿಲ್​ ಐಲ್ಯಾಂಡ್​ನಲ್ಲಿ 6.1ರಷ್ಟು ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ರಷ್ಯಾದಿಂದ 3,268 ಕಿ.ಮೀ ದೂರದಲ್ಲಿರುವ ಕುರಿಲ್​ ಐಲ್ಯಾಂಡ್​ನಲ್ಲಿ 38 ಕಿ.ಮೀ ಆಳದಲ್ಲಿ ಭೂಮಿ ಕಂಪಿಸಿದೆ ಎಂದು ತಿಳಿದುಬಂದಿದೆ.