ಬೆಂಗಳೂರು : ಇತಿಹಾಸದಲ್ಲೇ ಮೊದಲ ಬಾರಿಗೆ ಕೃಷಿ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ರೈತರೊಬ್ಬರಿಗೆ ಗೌರವ ಡಾಕ್ಟರೇಟ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮುಂದಿನ ವರ್ಷದಿಂದ ಜಾರಿಗೆ ಬರಲಿದೆ ಎಂದು ಬೆಂಗಳೂರು ಕೃಷಿ ವಿವಿ ಕುಲಪತಿ ಡಾ.ಎಸ್. ರಾಜೇಂದ್ರ ಪ್ರಸಾದ್ ಹೇಳಿದ್ದಾರೆ.
ಮುಂದಿನ ವರ್ಷದಿಂದ ಕೃಷಿ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ರೈತರೊಬ್ಬರಿಗೆ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ಹೊಸ ಆವಿಷ್ಕಾರ ಮಾಡುವ, ವರಮಾನ ಗಳಿಕೆಯ ಹೊಸ ಮಾರ್ಗ ತೋರಿಸುವ ಪ್ರಗತಿಪರ ರೈತರನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಈ ವರ್ಷವೇ ರೈತರೊಬ್ಬರನ್ನು ಹುಡುಕಿ ಗೌರವ ಡಾಕ್ಟರೇಟ್ ನೀಡಬೇಕಿತ್ತು. ಆದರೆ ಕರೋನಾ ವೈರಸ್ ಹಿನ್ನೆಲೆಯಲ್ಲಿ ಸಾಧಕರನ್ನು ಗುರುತಿಸುವುದು ಸಾಧ್ಯವಾಗಲಿಲ್ಲ ಎಂದು ಹೇಳಿದರು.