ನವದೆಹಲಿ: ಜಂತರ್ ಮಂತರ್ನಲ್ಲಿ ಕಳೆದ ತಿಂಗಳು ನಡೆದ ಕಾರ್ಯಕ್ರಮದಲ್ಲಿ ‘ದ್ವೇಷ ಭಾಷಣ’ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಕಾರ್ಯ ಕ್ರಮದ ಆಯೋಜಕರೊಬ್ಬರಲ್ಲಾದ ಪ್ರೀತ್ ಸಿಂಗ್ ಅವರಿಗೆ ದೆಹಲಿ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ.
ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಮುಕ್ತಾ ಗುಪ್ತಾ ಅವರು, ಅರ್ಜಿದಾರರಿಗೆ ಜಾಮೀನು ನೀಡಲಾಗಿದೆ’ ಎಂದು ಹೇಳಿದರು.
ಆಗಸ್ಟ್ 8ರಂದು ಜಂತರ್ ಮಂತರ್ನಲ್ಲಿ ಆಯೋಜಿಸಿದ್ದ ರ್ಯಾಲಿಯಲ್ಲಿ ನಿರ್ದಿಷ್ಟ ಧರ್ಮದ ವಿರುದ್ಧ ಪ್ರಚಾರ ಮಾಡಲು ಯುವಕರನ್ನು ಪ್ರಚೋದಿಸಿದ ಮತ್ತು ವಿವಿಧ ಗುಂಪುಗಳ ನಡುವೆ ದೇಷ ಬಿತ್ತುವ ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿಸಲಾಗಿತ್ತು. ನಂತರ ಆಗಸ್ಟ್ 10ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸ ಲಾಗಿತ್ತು.
ಪ್ರೀತ್ ಸಿಂಗ್ ಪರ ವಕೀಲ ವಿಷ್ಣು ಶಂಕರ್ ಜೈನ್ ಜಾಮೀನು ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ, ‘ಸಿಂಗ್ ಅವರು ಯಾವುದೇ ವ್ಯಕ್ತಿ ಅಥವಾ ಸಮುದಾಯದ ವಿರುದ್ಧ ಪ್ರಚೋದನಕಾರಿ ಭಾಷಣ ಅಥವಾ ಯಾವುದೇ ದ್ವೇಷ ಬಿತ್ತುವ ಘೋಷಣೆ ಕೂಗುವುದರಲ್ಲಿ ಭಾಗಿಯಾಗಿಲ್ಲ’ ಎಂದು ಹೇಳಿದ್ದರು.