Wednesday, 23rd October 2024

ಅಕ್ಟೋಬರ್ 1 ರಿಂದ ಶೇ.100ರಷ್ಟು ಚಿತ್ರಮಂದಿರಗಳ ಭರ್ತಿಗೆ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್ 1 ರಿಂದ ಕೋವಿಡ್ ಪಾಸಿಟಿವಿಟಿ ದರ (ಶೇ.1ಕ್ಕಿಂತ) ಕಡಿಮೆ ಇರುವಂತ ಜಿಲ್ಲೆಗಳಲ್ಲಿ ಶೇ.100ರಷ್ಟು ಚಿತ್ರಮಂದಿರಗಳ ಭರ್ತಿಗೆ ಅವಕಾಶ, ಅಕ್ಟೋಬರ್ 3 ರಿಂದ ಪಬ್ ಗಳನ್ನು ತೆರೆ ಯಲು ಹಾಗೂ 6 ರಿಂದ 12ನೇ ತರಗತಿಗಳನ್ನು ಶೇ.100 ಆರಂಭಿಸಲು ಅವಕಾಶ ನೀಡಲಾಗುತ್ತಿದೆ ಎಂಬು ದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಪಾಸಿಟಿವಿಟಿ ದರ ಶೇ.1ಕ್ಕಿಂಡ ಕಡಿಮೆ ಇರುವ ಜಿಲ್ಲೆಗಳಲ್ಲಿ ಚಿತ್ರಮಂದಿರಗಳ ಎಲ್ಲ ಆಸನಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಜೊತೆಗೆ ಥಿಯೆಟರ್ ಪ್ರವೇಸಿಸಲು ಪ್ರೇಕ್ಷಕರು ಕಡ್ಡಾಯವಾಗಿ ಒಂದು ಡೋಸ್‍ ಲಸಿಕೆ ಪಡೆದಿರಬೇಕೆಂದು ಹೇಳಿದೆ.

ಶುಕ್ರವಾರ ನಡೆದ ಕೋವಿಡ್ ನಿಯಂತ್ರಣ ಸಭೆಯ ಬಳಿಕ ಮಾತನಾಡಿ, ಒಂದು ರಾಜ್ಯದಲ್ಲಿ ಪ್ರಸ್ತುತ ಸರಾಸರಿ .66 ಇದೆ. ನಾಲ್ಕೈದು ಜಿಲ್ಲೆಗಳನ್ನು ಹೊರತು ಪಡಿಸಿ, ಇದೇ ಪ್ರಮಾಣದಲ್ಲಿ ಕರೋನಾ ಪಾಸಿಟವಿಟಿ ದರವಿದೆ. ಕೋವಿಡ್ ಪಾಸಿಟಿವಿ ಶೇ.1ಕ್ಕಿಂತ ಕಡಿಮೆ ಇರುವಂತ ಜಿಲ್ಲೆಗಳಲ್ಲಿ ಶೇ.100ರಷ್ಟು ಚಿತ್ರಮಂದಿರಗಳ ಭರ್ತಿಗೆ ಅವಕಾಶ ನೀಡಲಾಗುತ್ತಿದೆ.

ರಾತ್ರಿ ಕರ್ಪ್ಯೂ ವೇಳೆಯನ್ನು ರಾತ್ರಿ 10 ರಿಂದ 5ಕ್ಕೆ ನಿಗದಿ ಪಡಿಸಲಾಗಿದೆ. ರಾಜ್ಯದಲ್ಲಿ 6 ರಿಂದ 12ನೇ ತರಗತಿಗಳಿಗೆ ಶೇ.100ರಷ್ಟು ಅವಕಾಶ ನೀಡಲಾಗುತ್ತಿದೆ. ದಸರಾ ಬಗ್ಗೆ ನಂತರ ತೀರ್ಮಾನ ಮಾಡಲಾಗುತ್ತದೆ ಎಂದರು.