Friday, 22nd November 2024

ಹರ್ಯಾಣದ ಪಾಣಿಪತ್‌ನಲ್ಲಿ ಇಂದು ಬೃಹತ್ ರ್ಯಾಲಿ

ನವದೆಹಲಿ: ಕೇಂದ್ರದ ಮೂರು ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ಪ್ರತಿಭಟನೆ ನಡೆಸು ತ್ತಿರುವ ರೈತರು ಭಾನುವಾರ ಹರ್ಯಾಣದ ಪಾಣಿಪತ್‌ನಲ್ಲಿ ಬೃಹತ್ ರ್ಯಾಲಿ ಆಯೋಜಿಸಿದ್ದಾರೆ.

ಕರ್ನಲ್ ಮೂಲದ ರೈತ ಮುಖಂಡ ರತನ್ ಮಾನ್, ರೈತ ವಿರೋಧಿ ಕಾನೂನುಗಳ ಬಗ್ಗೆ ಸರ್ಕಾರವನ್ನು ಎಚ್ಚರಿಸುವ ಸಲುವಾಗಿ ಈ ರ್ಯಾಲಿ ಆಯೋಜಿಸ ಲಾಗಿದೆ” ತಿಳಿಸಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸುವ ಸಾವಿರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಹಾಗೂ ಭಾರತ್ ಬಂದ್ ಹಿನ್ನೆಲೆಯಲ್ಲಿ ಮುಖಂಡರು ಪ್ರಮುಖ ಸಂದೇಶ ನೀಡಲಿದ್ದಾರೆ ಎಂದು ವಿವರಿಸಿದ್ದಾರೆ.

ಕಳೆದ ವರ್ಷ ಕೇಂದ್ರ ಸರ್ಕಾರ ಜಾರಿಗೆ ತಂದ ಕಾಯ್ದೆಗಳ ವಿರುದ್ಧ ನಡೆಸುತ್ತಿರುವ ಪ್ರತಿಭಟನೆ ಹತ್ತು ತಿಂಗಳು ಪೂರೈಸುವ ಹಿನ್ನೆಲೆಯಲ್ಲಿ ಸೋಮವಾರ (ಸೆ.27) ಭಾರತ್ ಬಂದ್‌ಗೆ ಕರೆ ನೀಡಲಾಗಿದೆ.

ಭಾರತೀಯ ಕಿಸಾನ್ ಯೂನಿಯನ್‌ನ ಹರ್ಯಾಣ ಘಟಕ ರ್ಯಾಲಿ ಆಯೋಜಿಸಿದ್ದು, ಸಂಯುಕ್ತ ಕಿಸಾನ್ ಮೋರ್ಚಾದ ಹಲವು ಮುಖಂಡರನ್ನು ಆಹ್ವಾನಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸೋಮವಾರ ನಡೆಯುವ ಭಾರತ ಬಂದ್‌ಗೆ ದೇಶದ ಜನತೆ ಕೈಜೋಡಿಸಬೇಕು ಎಂದು ಎಸ್‌ಕೆಎಂ ಮನವಿ ಮಾಡಿದೆ. ಪ್ರಸೋಮವಾರ ಬೆಳಗ್ಗೆ 6ರಿಂದ ಸಂಜೆ 4ರವರೆಗೆ ಬಂದ್ ಆಚರಿಸಲು ಎಸ್‌ಕೆಎಂ ಕರೆ ನೀಡಿದೆ.