Tuesday, 26th November 2024

ಚರಣ್‍ಜಿತ್ ಸಿಂಗ್ ಛನ್ನಿ ಸಂಪುಟ ರಚನೆ, ಕಳಂಕಿತ ರಾಣಾ ಗುರ್ಜಿತ್ ಸಿಂಗ್’ಗೂ ಸಚಿವ ಸ್ಥಾನ

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಛನ್ನಿ ಭಾನುವಾರ ಸಂಪುಟ ರಚನೆ ಮಾಡಿದ್ದಾರೆ.

2022 ರ ವಿಧಾನಸಭಾ ಚುನಾವಣೆಯನ್ನು ಗುರಿಯಾಗಿರಿಸಿಕೊಂಡು ಸಂಪುಟ ರಚನೆ ಮಾಡ ಲಾಗಿದ್ದು, 9 ಮಂದಿ ಅನುಭವಿಗಳನ್ನು ಸಂಪುಟದಲ್ಲಿ ಸೇರಿಸಿಕೊಳ್ಳ ಲಾಗಿದ್ದು, 6 ಮಂದಿ ಹೊಸ ಶಾಸಕರಿಗೆ ಮಣೆ ಹಾಕಲಾಗಿದೆ.

ರಾಜ್ಯಪಾಲ ಭನ್ವರಿಲಾಲ್ ಪುರೋಹಿತ್ ಅವರು ನೂತನ ಸಚಿವರುಗಳಿಗೆ ಪ್ರಮಾಣವಚನ ಬೋಧಿಸಿದರು.15 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸರು. ಮರಳು ಹಗರಣದ ಕಳಂಕ ಹೊಂದಿದ್ದ ಮಾಜಿ ಸಚಿವ ರಾಣಾ ಗುರ್ಜಿತ್ ಸಿಂಗ್ ಅವರಿಗೂ ಸಚಿವ ಸ್ಥಾನ ನೀಡಲಾಗಿದೆ.

ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಚರಣ್‍ಜಿತ್ ಛನ್ನಿ ಅವರನ್ನು ಆಯ್ಕೆ ಮಾಡಲಾಗಿತ್ತು.

ಇಂದು ಸಚಿವರಾಗಲು ಸಾಧ್ಯವಾಗದ ಶಾಸಕರುಗಳಿಗೆ ಸರಕಾರದ ಮಟ್ಟದಲ್ಲಿ ಉನ್ನತ ಸ್ಥಾನಮಾನ ಮತ್ತು ಪಕ್ಷದಲ್ಲಿ ಗೌರವಯುತ ಹುದ್ದೆ ನೀಡಲಾಗುವುದು’ ಎಂದು ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಅವರು ಹೇಳಿದರು.

ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಮತ್ತು ಕ್ಯಾಪ್ಟನ್ ಅಮರೀಂದರ್ ಸಿಂಗ್ ಆಂತರಿಕ ಕಚ್ಚಾಟದ ಪರಿಣಾಮ ಕ್ಯಾಪ್ಟನ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಬಹಿರಂಗವಾಗಿ ಸಿಧು ವಿರುದ್ಧ ದೇಶ ದ್ರೋಹದ ಆರೋಪ ಮಾಡಿದ್ದರು.