ಕೋಲ್ಕತಾ: ನಿಗದಿತ ವೇಳಾಪಟ್ಟಿಯಂತೆಯೇ ಭವಾನಿಪುರ ಉಪ ಚುನಾವಣೆ ನಡೆಯಲಿದೆ ಎಂದು ಕೋಲ್ಕತಾ ಹೈಕೋರ್ಟ್ ಈ ಸಂಬಂಧ ದಾಖಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದೆ.
ಅರ್ಜಿಯ ವಿಚಾರಣೆಯನ್ನು ಮಂಗಳವಾರ ನಡೆಸಿದ ಕೋಲ್ಕತಾ ಹೈಕೋರ್ಟ್ ನ ಹಂಗಾಮಿ ಮುಖ್ಯ ನ್ಯಾ.ರಾಜೇಶ್ ಬಿಂದಾಲ್ ಮತ್ತು ನ್ಯಾ.ಆರ್.ಭಾರದ್ವಾಜ್ ಅವರನ್ನೊಳಗೊಂಡ ವಿಭಾಗೀಯ ಪೀಠವು, ಸೆ.30 ರಂದು ನಿಗದಿಯಂತೆ ಚುನಾವಣೆ ನಡೆಯಲಿದೆ ಎಂದು ಆದೇಶಿಸಿದೆ.
ಪಶ್ಚಿಮ ಬಂಗಾಳ ಮುಖ್ಯ ಕಾರ್ಯದರ್ಶಿ ಭವಾನಿಪುರದಲ್ಲಿ ಉಪಚುನಾವಣೆ ನಡೆಸಲು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದು ಅಂತಹ ಪತ್ರ ಬರೆದಿರು ವುದು ಸೂಕ್ತವಲ್ಲ ಎಂದು ಪೀಠ ಹೇಳಿದೆ. ಮುಖ್ಯ ಕಾರ್ಯದರ್ಶಿ ಪತ್ರ ದಲ್ಲಿ ಭವಾನಿಪುರಕ್ಕೆ ಉಪ ಚುನಾವಣೆ ನಡೆಯದಿದ್ದರೆ “ಸಾಂವಿಧಾನಿಕ ಬಿಕ್ಕಟ್ಟು” ಉಂಟಾಗುತ್ತದೆ ಎಂದು ಹೇಳಿ ದ್ದರು. ಇದೇ ಪದಕ್ಕೆ ನ್ಯಾಯಾಲಯ ಅಕ್ಷೇಪ ವ್ಯಕ್ತಪಡಿಸಿದೆ.
ಇನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭವಾನಿಪುರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದು, ಗೆದ್ದರೆ ಮಾತ್ರ ಸಿಎಂ ಗಾದಿಯಲ್ಲಿ ಮುಂದುವರೆಯಲಿದ್ದಾರೆ.