ನವದೆಹಲಿ: ಸತತ ಮೂರು ವಾರಗಳಿಂದ ಯಥಾಸ್ಥಿತಿ ಕಾಪಾಡಿಕೊಂಡಿದ್ದ ಪೆಟ್ರೋಲ್ ದರ ಮಂಗಳವಾರ ಏರಿಕೆ ಮಾಡಲಾಗಿದ್ದು, ಡೀಸೆಲ್ ದರದಲ್ಲೂ ಮತ್ತೆ ಏರಿಕೆ ಕಂಡಿದೆ.
ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಲೀಟರ್ ಪೆಟ್ರೋಲ್ ಬೆಲೆಯಲ್ಲಿ 20ರಿಂದ 25 ಪೈಸೆ ಹೆಚ್ಚಳ ಮಾಡಿ ದ್ದರೆ, ಕಳೆದ ಐದು ದಿನಗಳಲ್ಲಿ ನಾಲ್ಕನೇ ಬಾರಿಗೆ ಏರಿಕೆ ಕಾಣುತ್ತಿರುವ ಲೀಟರ್ ಡೀಸೆಲ್ ದರ 75 ಪೈಸೆ ಹೆಚ್ಚಳವಾಗಿದೆ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 101.39 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.57 ರೂಪಾಯಿಗೆ ಏರಿಕೆ ಆಗಿದೆ.
ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 107.47 ರೂ. ಹಾಗೂ ಲೀಟರ್ ಡೀಸೆಲ್ ದರ 97.21 ರೂಪಾಯಿಗೆ ಏರಿಕೆ ಆಗಿದೆ. ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 101.87 ರೂ. ಹಾಗೂ ಲೀಟರ್ ಡೀಸೆಲ್ ದರ 92.62 ರೂಪಾಯಿ ಇದೆ.
ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ಗೆ 99.15 ರೂ. ನಿಗದಿ ಆಗಿದ್ದರೆ, ಡೀಸೆಲ್ ದರ 94.17 ರೂಪಾಯಿಗೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 104.92 ರೂ. ಹಾಗೂ ಲೀಟರ್ ಡೀಸೆಲ್ ದರ 95.06 ರೂಪಾಯಿ ಇದೆ.
ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 109.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.45 ರೂಪಾಯಿ ಇದೆ.