ನವದೆಹಲಿ: ಬುಧವಾರ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 18,870 ಕರೋನಾ ಪ್ರಕರಣಗಳು ದೃಢಪಟ್ಟಿದೆ. ಇದೇ ಅವಧಿಯಲ್ಲಿ 378 ಮಂದಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,37,16,451ಕ್ಕೆ ತಲುಪಿದ್ದು, 4,47,751ಕ್ಕೆ ಸಾವಿನ ಸಂಖ್ಯೆ ಏರಿಕೆ ಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2,82,520ಕ್ಕೆ ತಲುಪಿದೆ.
ಭಾರತದಲ್ಲಿ ಒಂದೇ 15,04,713 ಮಂದಿಯನ್ನು ಕರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 56,74,50,185 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 87,66,63,490 ಜನರಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.