Friday, 20th September 2024

ಬಸ್-ಟ್ರಕ್ ಡಿಕ್ಕಿ: ಏಳು ಮಂದಿ ಸಾವು

ಭಿಂದ್: ಮಧ್ಯಪ್ರದೇಶದ ಭಿಂದ್​ ಜಿಲ್ಲೆಯಲ್ಲಿ ಬಸ್ ಹಾಗೂ ಟ್ರಕ್ ನಡುವೆ ಡಿಕ್ಕಿ ಸಂಭವಿಸಿ, ಏಳು ಮಂದಿ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಓರ್ವ ಮಹಿಳೆ ಸೇರಿದಂತೆ ಏಳು ಮಂದಿ ಮೃತಪಟ್ಟು, 13 ಮಂದಿ ಗಾಯಗೊಂಡಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಗ್ವಾಲಿಯರ್​ನಿಂದ ಬರೇಲಿಗೆ ಹೋಗುತ್ತಿದ್ದ ಬಸ್​ ಇದಾಗಿದ್ದು, ಗೋಹಾದ್​ ಬಳಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಭಿಂದ್ ಪೊಲೀಸ್​ ವರಿಷ್ಠಾಧಿಕಾರಿ ಭೇಟಿ ನೀಡಿದ್ದು, ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.