Thursday, 19th September 2024

ಮತ ಚಲಾಯಿಸಿದ ಹೀರಾಬೆನ್ ಮೋದಿ

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಗಾಂಧಿನಗರ ಮುನ್ಸಿಪಲ್ ಕಾರ್ಪೊರೇಷನ್ (ಜಿಎಂಸಿ) ಚುನಾವಣೆಗೆ ಮತದಾನ ಮಾಡಿದರು.

ಗಾಂಧಿನಗರದಲ್ಲಿರುವ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಹೀರಾಬೆನ್ ಮೋದಿ ಅವರು ನಗರದ ರಾಯ್ಸನ್ ಹಳ್ಳಿಯ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿದರು.

11 ವಾರ್ಡ್‌ಗಳಲ್ಲಿ 44 ಕೌನ್ಸಿಲರ್‌ಗಳನ್ನು ಆಯ್ಕೆ ಮಾಡಲು ಮತದಾನ ನಡೆದಿದೆ. ಭೂಪೇಂದ್ರ ಪಟೇಲ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಪ್ರಮುಖ ಚುನಾವಣೆಯಾಗಿದೆ.

ಸ್ಥಳೀಯ ಸಂಸ್ಥೆಯಲ್ಲಿ ಬಿಜೆಪಿ ಅಧಿಕಾರದಲ್ಲಿದೆ, ಆಮ್ ಆದ್ಮಿ ಪಕ್ಷ (ಎಎಪಿ) ಕೂಡ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದೆ. ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಏಪ್ರಿಲ್‌ನಲ್ಲಿ ನಡೆಯಬೇಕಿದ್ದ ಚುನಾವಣೆ ಈಗ ನಿಗದಿಯಾಗಿದೆ.